ಹುಬ್ಬಳ್ಳಿ :ಕೋವಿಡ್ ಸಂದರ್ಭದಲ್ಲಿ ನೂರಾರು ಕೋಟಿ ರೂ. ಹಗರಣ ನಡೆದಿರುವುದು ಮೇಲ್ನೋಟಕ್ಕೆ ಗೊತ್ತಾಗಿತ್ತು. ಅದರ ಬಗ್ಗೆ ತನಿಖೆ ನಡೆಸುವುದು ಸರ್ಕಾರದ ಕರ್ತವ್ಯವಾಗಿದೆ. ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ತನಿಖೆ ನಡೆಸಿದ್ದೇವೆ. ಅವರು ಮಧ್ಯಂತರ ವರದಿ ನೀಡಿದ್ದಾರೆ ಅದರದ ಆಧಾರದ ಮೇಲೆ ಏನೆಲ್ಲಾ ಹಗರಣ ಆಗಿದೆ ಎಂಬ ಕುರಿತು ಹಿರಿಯ ಅಧಿಕಾರಿಗಳ ಪರಿಶೀಲನಾಗಿ ಸಮಿತಿ ರಚನೆ ಮಾಡಲಾಗಿದೆ ಯಾವುದೇ ರೀತಿಯ ದುರುದ್ದೇಶ ಇಲ್ಲ ಎಂದು
ವೈದ್ಯಕೀಯ ಸಚಿವ ಶರಣಪ್ರಕಾಶ ಪಾಟೀಲ್ ಹೇಳಿದರು.
Accident: ಮಿನಿ ಟ್ರಕ್ಗೆ ಬಸ್ ಡಿಕ್ಕಿ; 12 ಜನ ಸಾವು, 16 ಮಂದಿಗೆ ಗಾಯ!
ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ರೀತಿಯ ಮುಡಾ ಹಗರಣ ಮುಚ್ಚಿಚಹಾಕುವ ಹಾಗೂ ವಿಷಯಾಂತರ ಮಾಡುವ ಉದ್ದೇಶ ಇಲ್ಲ ಎಂದ ಅವರು ಯಾರು ತಪ್ಪು ಮಾಡಿದ್ದಾರೆ ಅವರ ಮೇಲೆ ಕ್ರಮ ಆಗುತ್ತದೆ ಎಂದರು.
ಇಲ್ಲಿಯ ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ (ಕೆಎಂಸಿಆರ್ಐ)ಯು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್ )ಯಷ್ಟೇ ಪ್ರಭಾವಶಾಲಿಯಾಗಿದೆ. ಇಲ್ಲಿ ಇನ್ನು ಹೆಚ್ಚಿನ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಕಲ್ಪಿಸಲಾಗುವುದು. ಹುಬ್ಬಳ್ಳಿ ಬದಲು ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಕುರಿತು ಈ ರೀತಿ ಪ್ರತಿಕ್ರಿಯೆ ನೀಡಿದರು.
ಹಿಂದುಳಿದ ಪ್ರದೇಶವಾದ ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಬಗ್ಗೆ ಕಾಂಗ್ರೆಸ್ ಪಕ್ಷದ ಚುನಾವಣೆ ಪ್ರಾಣಾಳಿಕೆಯಲ್ಲೇ ಘೋಷಿಸಲಾಗಿತ್ತು. ಅದರಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಈ ಸಂಬಂಧ ಇತ್ತೀಚೆಗೆ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಲಾಗಿತ್ತು. ಕೆಎಂಸಿಆರ್ಐ ಏಮ್ಸ್ಗಿಂತ ಯಾವುದೇ ರೀತಿಯಲ್ಲೂ ಕಡಿಮೆ ಇಲ್ಲ. ಇಲ್ಲಿ ಎಲ್ಲ ರೀತಿಯ ವೈದ್ಯಕೀಯ ಸೌಲಭ್ಯಗಳಿವೆ. ಜತೆಗೆ ಪಕ್ಕದಲ್ಲೇ ಡಿಮ್ಹಾನ್ ಸಹ ಇದೆ ಎಂದರು.
ಹುಬ್ಬಳ್ಳಿಗೆ ಮಂಜೂರಾಗಿದ್ದ ಪ್ರಾದೇಶಿಕ ಕ್ಯಾನ್ಸರ್ ಚಿಕಿತ್ಸಾ ಕೇಂದ್ರವನ್ನು ಹಿಂದಿನ ಸರ್ಕಾರ ಬೆಳಗಾವಿಗೆ ಸ್ಥಳಾಂತರಿಸಿದೆ. ಹುಬ್ಬಳ್ಳಿ ಕೆಎಂಸಿಅರ್ಐ ನಲ್ಲಿ ಕ್ಯಾನ್ಸರ್ಗೆ ಸಂಬಂಧಿಸಿದ ಕಿಮೋಥೆರಪಿ, ಲಿನಿಯಾಕ್, ಇನ್ನಿತರ ಚಿಕಿತ್ಸಾ ಸೌಲಭ್ಯಗಳಿವೆ. ಕೆಎಂಸಿಆರ್ಐ ನಲ್ಲಿ ಐವಿಎಫ್ ಕೇಂದ್ರ ಸ್ಥಾಪನೆ ಮಾಡಲಾಗುತ್ತಿದೆ. 8 ಮಾಡ್ಯುಲರ್ ಶಸ್ತ್ರಚಿಕಿತ್ಸೆ ಕೊಠಡಿ ಮಂಜೂರಾಗಿದೆ. ಕ್ರೀಡಾಂಗಣವನ್ನು ಅಭಿವೃದ್ಧಿ ಪಡಿಸಲಾಗಿದೆ. ವಿದ್ಯಾರ್ಥಿ ನಿಲಯ ನವೀಕರಿಸಲಾಗುತ್ತಿದೆ ಎಂದು ಹೇಳಿದರು.
ಕೆಎಂಸಿಆರ್ಐ ಗೆ ಸೌಲಭ್ಯಗಳಲ್ಲಿ ಏನಾದರೂ ಕೊರತೆ ಇದ್ದಲ್ಲಿ, ಈ ಬಗ್ಗೆ ಗಮನಕ್ಕೆ ತಂದರೆ ಅದನ್ನು ಪೂರೈಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.