ಬೆಂಗಳೂರು:- ಬೆಂಗಳೂರಿನ ಸ್ಥಳೀಯರ ವಿರುದ್ಧ ಉತ್ತರ ಭಾರತದ ಯುವತಿಯೊಬ್ಬಳು ನಾಲಿಗೆ ಹರಿಬಿಟ್ಟಿದ್ದು, ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾಳೆ.
ಬೇರೆ ಕಡೆಯಿಂದ ಬಂದು ಇಲ್ಲಿ ಕೆಲಸ ಮಾಡುತ್ತಿರುವ ನಮ್ಮಂತವರಿಂದಲೇ ಇಡೀ ಬೆಂಗಳೂರು ಅಭಿವೃದ್ಧಿಯಾಗುತ್ತಿದೆ. ನಾವೆಲ್ಲಾ ತೆರಿಗೆ ಕಟ್ಟುತ್ತಿದ್ದೇವೆ. ಇವರಿಗೆ ನಾವು ಬಾಡಿಗೆ ಕಟ್ಟುತ್ತಿದ್ದೇವೆ. ಇಡೀ ಬೆಂಗಳೂರಿನ ಆರ್ಥಿಕತೆ ನಡೆಯುತ್ತಿರುವುದೇ ನಮ್ಮಿಂದ. ಕರ್ಮ ಇವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಕನ್ನಡಿಗರನ್ನು ನಿಂದಿಸಿದ್ದಳು.
ಸದ್ಯ ಉತ್ತರ ಭಾರತೀಯ ಮೂಲದ ಯುವತಿ ಬೆಂಗಳೂರಿನ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಯುವತಿ ಮೇಲೆ ಕನ್ನಡಿಗರು ಆಕ್ರೋಶ ಹೊರ ಹಾಕಿದ್ದಾರೆ. ಬೆಂಗಳೂರಿನಲ್ಲೇ ಇದ್ದುಕೊಂಡು ನಮ್ಮ ರಾಜ್ಯದ ಬಗ್ಗೆ ಮಾತಾಡಿದ್ದ ಯುವತಿ ಸದ್ಯ ವಿಡಿಯೋ ಡಿಲೀಟ್ ಮಾಡಿ ಯುವತಿ ಕ್ಷಮೆ ಕೇಳಿದ್ದಾಳೆ