ಭಾರತದ ಜನಪ್ರಿಯ ಹಬ್ಬಗಳಲ್ಲಿ ಗಣೇಶ ಚತುರ್ಥಿಯೂ (Ganesh Chaturthi) ಒಂದು. ಸಂಪತ್ತು ಮತ್ತು ಬುದ್ದಿವಂತಿಕೆಯ ದೇವರು ಗಣೇಶನನ್ನು ಸ್ತುತಿಸುವ ಹಬ್ಬ. ದೇಶದೆಲ್ಲೆಡೆ ಗೌರಿ-ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಆರಾಧಿಸಲಾಗುತ್ತದೆ.
ಈ ಸಂಭ್ರಮಕ್ಕೆ ಆಸ್ಟ್ರೇಲಿಯಾದ ಮಾಜಿ ಆಟಗಾರ ಡೇವಿಡ್ ವಾರ್ನರ್ ಶುಭಾಶಯ ತಿಳಿಸಿರುವುದು ವಿಶೇಷ. ತಮ್ಮ ಇನ್ಸ್ಟಾಗ್ರಾಮ್ ಖಾತೆಯ ಮೂಲಕ ವಾರ್ನರ್ ಚೌತಿ ಹಬ್ಬಕ್ಕೆ ವಿಶಸ್ ತಿಳಿಸಿದ್ದಾರೆ.
ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಘ್ನನಿವಾರಕ ಗಣಪನ ಫೋಟೋವನ್ನು ಹಂಚಿಕೊಂಡಿರುವ ಡೇವಿಡ್ ವಾರ್ನರ್, ಹ್ಯಾಪಿ ಗಣೇಶ ಚತುರ್ಥಿ ಎಂದು ಸರ್ವರಿಗೂ ಶುಭಾಶಯ ತಿಳಿಸಿದ್ದಾರೆ. ಇದೀಗ ವಾರ್ನರ್ ಹಂಚಿಕೊಂಡಿರುವ ಶುಭಾಶಯದ ಫೋಟೋ ವೈರಲ್ ಆಗಿದ್ದು, ಭಾರತೀಯ ಅಭಿಮಾನಿಗಳಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.