ಬೆಂಗಳೂರು: ವಿಧಾನಸೌಧದಲ್ಲಿ ನಡೆಯುತ್ತಿದ್ದ ಸಚಿವ ಸಂಪುಟ ಸಭೆಯಲ್ಲಿ ಇದೀಗ ಮೊದಲ ಬಾರಿಗೆ ಜಿಲ್ಲೆಯಲ್ಲಿ ನಡೆಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸೆಪ್ಟಂಬರ್ 17 ರಂದು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆಯನ್ನು ನಡೆಸಲು ನಿರ್ಧಾರ ಮಾಡಲಾಗಿದೆ.ಈ ಕುರಿತಾಗಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ.
Eye Twitching: ಎಡಗಣ್ಣು ಪಟಪಟ ಅಂತ ಹೊಡೆದುಕೊಳ್ತಿದ್ರೆ ಹೀಗೆಲ್ಲಾ ಆಗ್ಬೋದಂತೆ!
ಸೆಪ್ಟಂಬರ್ 17 ರಂದು ಸಂಜೆ 4 ಗಂಟೆಗೆ ಈ ವರ್ಷದ 19 ನೇ ಸಾಲಿನ ಸಚಿವ ಸಂಪುಟ ಸಭೆಯನ್ನು ಕಲಬುರಗಿ ಜಿಲ್ಲೆಯ ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದೆ. ಕಲಬುರಗಿಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ವ್ಯಾಪ್ತಿಯ ವಿಷಯಗಳನ್ನು ವಿಶೇಷವಾಗಿ ಪರಿಗಣಿಸಲಾಗುವುದು ಎಂದು ತಿಳಿಸಲಾಗಿದೆ.