ರಾಜಸ್ಥಾನ ಮೂಲದ ಟೆಕ್ಸ್ಟೈಲ್ ಉದ್ಯಮಿ ಜೊತೆ ರಮ್ಯಾ ನಿಶ್ಚಿತಾರ್ಥ ಆಗಿದೆ ಅನ್ನೋ ವಿಚಾರ ಗಾಂದಿನಗರದ ಗಲ್ಲಿಗಲ್ಲಿಗಳಲ್ಲಿ ಇವತ್ತು ಕೇಳಿ ಬಂತು. ಆಪ್ತರು ಹೇಳುವಂತೆ ಅಕ್ಟೋಬರ್ ನಲ್ಲಿ ಎಂಗೇಜ್ಮೆಂಟ್ ಆಗಲಿದ್ದಾರಂತೆ. ನವೆಂಬರ್ನಲ್ಲಿ ಬೆಂಗಳೂರಿನ ಅರಮನೆಯಲ್ಲಿ ಮದುವೆ ನಡೆಯಲಿದೆ. ರಾಜಸ್ಥಾನದ ಲ್ಲಿ ಆರತಕ್ಷತೆ ನಡೆಲಿದೆ ಅನ್ನೋ ಮಾಹಿತಿ ಹೊರಬಿದ್ದಿದೆ. ಇದನ್ನು ಅವರ ಆಪ್ತರು ಕೂಡ ಖಚಿತ ಪಡಿಸಿದ್ದಾರೆ.
ಇಂದು ರಾತ್ರಿಯೇ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ DCM ಡಿಕೆಶಿ: ಕಾರಣ ಇಲ್ಲಿದೆ!
ಈ ಕುರಿತು ಪ್ರತಿಕ್ರಿಯೆ ನೀಡಿರುವ ರಮ್ಯಾ, ಇದೊಂದು ರೂಮರ್ಸ್ ಎಂದು ಹೇಳುವ ಮೂಲಕ ಅಭಿಮಾನಿಗಳಿಗೆ ನಿರಾಸೆ ಮಾಡಿದ್ದಾರೆ. ಹಲವಾರು ಬಾರಿಯೂ ಮದುವೆ ಸುದ್ದಿ ಬಂದಾಗ ಅದನ್ನು ರಮ್ಯಾ ಅಲ್ಲಗಳೆಯುತ್ತಲೇ ಬಂದಿದ್ದಾರೆ. ಎಂದಿನಂತೆ ಈ ಬಾರಿಯೂ ಅದನ್ನೇ ಮಾಡಿದ್ದಾರೆ.