ಬೆಂಗಳೂರು:– ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕುಸ್ತಿಪಟುಗಳ ಬಗ್ಗೆ ಎಂದೂ ಮಾತನಾಡಬೇಡಿ: ಬ್ರಿಜ್ ಭೂಷಣ್ ಸಿಂಗ್ಗೆ ಬಿಜೆಪಿ ಎಚ್ಚರಿಕೆ!
ಸೆಪ್ಟೆಂಬರ್ 11 ರವರೆಗೆ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತಿರುವ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜೊತೆಗೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆಯಾಗಲಿದೆ. ಹೀಗಾಗಿ ಇಂದು ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.