ಒಲಿಂಪಿಕ್ ಕುಸ್ತಿಪಟುಗಳಾದ ವಿನೇಶ್ ಫೋಗಟ್ (Vinesh Phogat) ಹಾಗೂ ಬಜರಂಗ್ ಪುನಿಯಾ (Bajrang Punia) ಅವರ ರಾಜೀನಾಮೆಯನ್ನು ಭಾರತೀಯ ರೈಲ್ವೇ ಅಂಗೀಕರಿಸಿದೆ.
ಕಾಂಗ್ರೆಸ್ ಸೇರ್ಪಡೆಗೂ ಮುನ್ನ ಭಾರತೀಯ ರೈಲ್ವೆಯಲ್ಲಿನ (Indian Railways) ತಮ್ಮ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸಿದ್ದರು. ಇದೀಗ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ರಾಜೀನಾಮೆ ಅಂಗೀಕಾರಗೊಂಡಿದೆ
https://youtu.be/FTXJqcfmPkM
ಇತ್ತೀಚಿಗಷ್ಟೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ನವದೆಹಲಿಯಲ್ಲಿ ಭೇಟಿಯಾದ ನಂತರ ಅವರ ರಾಜಕೀಯ ಪ್ರವೇಶದ ಬಗ್ಗೆ ಊಹಾಪೋಹಗಳು ವ್ಯಕ್ತವಾಗಿದ್ದವು. ಅದಾದ ಬಳಿಕ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದರು. ಸೇರ್ಪಡೆಯಾದ ಬಳಿಕ ಕುಸ್ತಿಪಟು ವಿನೇಶ್ ಫೋಗಟ್ಗೆ ಹರಿಯಾಣ ಚುನಾವಣೆಯಲ್ಲಿ (Hariyana) ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ನೀಡಿತ್ತು.
ಪಕ್ಷ ಸೇರ್ಪಡೆಗೂ ಮುನ್ನ ವಿನೇಶ್ ಫೋಗಟ್ ಹಾಗೂ ಬಜರಂಗ್ ಪುನಿಯಾ ಭಾರತೀಯ ರೈಲ್ವೆಯಲ್ಲಿರುವ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. ಭಾರತೀಯ ರೈಲ್ವೆಗೆ ಸೇವೆ ಸಲ್ಲಿಸುವುದು ನನ್ನ ಜೀವನದ ಸ್ಮರಣೀಯ ಮತ್ತು ಹೆಮ್ಮೆಯ ಸಮಯ. ನನ್ನ ಜೀವನದ ಈ ಹಂತದಲ್ಲಿ ನಾನು ರೈಲ್ವೆ ಸೇವೆಯಿಂದ ಹೊರಬರಲು ನಿರ್ಧರಿಸಿದೆ. ನನ್ನ ರಾಜೀನಾಮೆಯನ್ನು ಭಾರತೀಯ ರೈಲ್ವೆಯ ಸಮರ್ಥ ಅಧಿಕಾರಿಗಳಿಗೆ ಸಲ್ಲಿಸಿದ್ದೇನೆ. ರಾಷ್ಟ್ರದ ಸೇವೆಯಲ್ಲಿ ರೈಲ್ವೆ ನನಗೆ ನೀಡಿದ ಈ ಅವಕಾಶಕ್ಕಾಗಿ ನಾನು ಭಾರತೀಯ ರೈಲ್ವೆ ಕುಟುಂಬಕ್ಕೆ ಯಾವಾಗಲೂ ಕೃತಜ್ಞಳಾಗಿದ್ದೇನೆ ಎಂದು ಎಕ್ಸ್ನಲ್ಲಿ ಫೋಗಟ್ ಪೋಸ್ಟ್ ಹಾಕಿದ್ದರು