ಬೆಂಗಳೂರು: ಮುಡಾ ಹಗರಣದ ಪ್ರಾಸಿಕ್ಯೂಷನ್ಗೆ ಅನುಮತಿ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಕರ್ನಾಟಕ ಹೈಕೋರ್ಟ್ ಮತ್ತೆ ಮುಂದೂಡಿದೆ. ಇಂದು(ಸೆ.09) ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 12ಕ್ಕೆ ಮುಂದೂಡಿದರು.
ಇನ್ನು ಸೆ.12ರಂದು ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಮತ್ತೊಂದು ಸುತ್ತಿನ ವಾದ ಮಂಡನೆ ಮಾಡಲಿದ್ದಾರೆ.