ಬೆಂಗಳೂರು:- ವೈದ್ಯರ ಇಂಗ್ಲೀಷ್ ಬರವಣಿಗೆ ಅಸ್ಪಷ್ಟವಾಗಿದ್ದು, ಕನ್ನಡದಲ್ಲೇ ಔಷಧ ಚೀಟಿ ಬರೆಯಲು ಆದೇಶಿಸಿ ಎಂದು ಆರೋಗ್ಯ ಸಚಿವರಿಗೆ ಪತ್ರ ಬರೆಯಲಾಗಿದೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಪತ್ರ ಬರೆದಿದ್ದಾರೆ.
ರೈತರಿಗೆ ತೂಕದಲ್ಲಿ ಮೋಸ ಮಾಡಿದ್ರೆ ತಲೆದಂಡ ಗ್ಯಾರಂಟಿ: ಅಧಿಕಾರಿಗಳ ಎಚ್ಚರಿಕೆ!
ಸರ್ಕಾರಿ ವೈದ್ಯರು ಕನ್ನಡದಲ್ಲಿಯೇ ಔಷಧಿ ಚೀಟಿ ಬರೆಯಲು ಶೀಘ್ರ ಆದೇಶ ಜಾರಿ ಮಾಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ಪತ್ರ ಬರೆದಿದ್ದು, ಭಾಷೆಯ ಬೆಳವಣಿಗೆಯ ದೃಷ್ಠಿಯಿಂದ ಸರ್ಕಾರಿ ವೈದ್ಯರೆಲ್ಲರೂ ಕನ್ನಡದಲ್ಲಿಯೇ ಔಷಧಿ ಚೀಟಿ ಬರೆಯಬೇಕೆಂದು ಕಡ್ಡಾಯ ಆದೇಶ ಮಾಡುವಂತೆ ಮನವಿ ಮಾಡಿದ್ದಾರೆ.
ಅಧುನಿಕ ಕಾಲಘಟ್ಟದಲ್ಲಿ ಭಾಷಾಭಿಮಾನ ಎನ್ನುವುದು ನೇಪಥ್ಯಕ್ಕೆ ಸರಿಯುತ್ತಿರುವುದು ಸಾಮಾಜಿಕ ಸ್ವಾಸ್ಥ್ಯದ ದೃಷ್ಠಿಯಿಂದ ಆರೋಗ್ಯಕರ ಬೆಳವಣಿಗೆ ಆಗಿರುವುದಿಲ್ಲ. ಇಂತಹ ಸಂದರ್ಭಗಳಲ್ಲಿ ಸಾಂಸ್ಥಿಕ ಪ್ರಯತ್ನಗಳು ಮಾತ್ರ ನಿರೀಕ್ಷಿತ ಪರಿಣಾಮವನ್ನು ದೊರಕಿಸಿ ಕೊಡುವುದಲ್ಲದೇ ರಾಜ್ಯ ಭಾಷೆಯ ಉಳಿವಿಗೆ ಮಹತ್ವದ ಕೊಡುಗೆಯನ್ನು ನೀಡುತ್ತದೆ.
ಇತ್ತೀಚೆಗೆ ರಾಯಚೂರಿಗೆ ಕಾರ್ಯನಿಮಿತ್ತ ತೆರಳಿದ ಸಂದರ್ಭದಲ್ಲಿ ಜಿಲ್ಲೆಯ ವೈದ್ಯರು ತಮ್ಮ ಔಷಧಿ ಚೀಟಿಗಳನ್ನು ಕನ್ನಡದಲ್ಲಿ ಬರೆಯಬೇಕೆಂದು ಪ್ರೇರೇಪಿಸಿ ಅಲ್ಲಿನ ಜಿಲ್ಲಾಧಿಕಾರಿಗೆ ಈ ಕುರಿತಂತೆ ಅಗತ್ಯ ಸೂಚನೆಗಳನ್ನು ಹೊರಡಿಸಲು ನಿರ್ದೇಶನವನ್ನು ನೀಡಿದ್ದೆ. ಮಾಧ್ಯಮಗಳಲ್ಲಿ ಬಂದ ವರದಿಗಳನ್ನು ಗಮನಿಸಿ ನೂರಾರು ವೈದ್ಯರು ಸ್ವಯಂಪ್ರೇರಿತರಾಗಿ ತಾವು ಕನ್ನಡ ಭಾಷೆಯನ್ನು ಉಳಿಸಲು ಔಷಧಿ ಚೀಟಿಗಳನ್ನು ಕನ್ನಡದಲ್ಲೇ ಬರೆಯುವ ಕೆಲಸವನ್ನು ಆರಂಭಿಸುತ್ತೇವೆ ಎಂದು ತಮ್ಮ ಭಾಷಾಭಿಮಾನವನ್ನು ನಮ್ಮಲ್ಲಿ ವ್ಯಕ್ತಪಡಿಸಿದ್ದಾರೆ.