ನವದೆಹಲಿ:- ಕ್ಯಾನ್ಸರ್ ಔಷಧಿಗಳ ಮೇಲಿನ ಜಿಎಸ್ಟಿ ದರ ಕಡಿತಕ್ಕೆ ನಿರ್ಧರಿಸಲಾಗಿದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
R Ashok: 60 ಲಕ್ಷ BPL ಕಾರ್ಡ್ಗಳನ್ನು ರದ್ದು ಮಾಡಲು ತಯಾರಿ; ಆರ್ ಅಶೋಕ್!
ನವೆಂಬರ್ನಲ್ಲಿ ನಡೆಯಲಿರುವ ಮುಂದಿನ ಸಭೆಯಲ್ಲಿ ವೈದ್ಯಕೀಯ ಆರೋಗ್ಯ ವಿಮೆಯ ಮೇಲಿನ ದರ ಕಡಿತದ ಕುರಿತು ಕೌನ್ಸಿಲ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಅವರು ತಿಳಿಸಿದ್ದಾರೆ.
ಸೋಮವಾರ ನಡೆದ ಜಿಎಸ್ಟಿ ಕೌನ್ಸಿಲ್ನ 54 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಸೀತಾರಾಮನ್, ಕೆಲವು ಕ್ಯಾನ್ಸರ್ ಔಷಧಿಗಳ ಮೇಲಿನ ಜಿಎಸ್ಟಿ ದರವನ್ನು ಶೇ.12 ರಿಂದ ಶೇ.5 ಕ್ಕೆ ಇಳಿಸಲಾಗಿದೆ ಎಂದು ಹೇಳಿದರು. ಕೌನ್ಸಿಲ್ ಸಹ ನಮ್ಕೀನ್ ಮೇಲಿನ ದರವನ್ನು ಶೇ.18 ರಿಂದ ಶೇ.12 ಕ್ಕೆ ಇಳಿಸಿದೆ ಎಂದು ಎಂದು ಮಾಹಿತಿ ನೀಡಿದ್ದಾರೆ.
ಕಳೆದ ಆರು ತಿಂಗಳಲ್ಲಿ ಆನ್ಲೈನ್ ಗೇಮಿಂಗ್ನಿಂದ ಗಳಿಸಿದ ಆದಾಯವು ಶೇ.412 ರಷ್ಟು ಹೆಚ್ಚಾಗಿದೆ. ಆನ್ಲೈನ್ ಗೇಮಿಂಗ್ನಿಂದ ಆದಾಯವು ಆರು ತಿಂಗಳಲ್ಲಿ 6,909 ಕೋಟಿ ರೂ.ಗೆ ಹೆಚ್ಚಾಗಿದೆ. ಇದಲ್ಲದೇ, ಕಳೆದ ಆರು ತಿಂಗಳಲ್ಲಿ ಕ್ಯಾಸಿನೊಗಳ ಆದಾಯವು ಶೇ.34 ರಷ್ಟು ಏರಿಕೆಯಾಗಿದೆ ಎಂದು ಸಚಿವರು ತಿಳಿಸಿದ್ದಾರೆ.