ಹುಬ್ಬಳ್ಳಿ:- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಪ್ರಸ್ತಾವನೆಗೆ ಸ್ಪಂದಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಹುಬ್ಬಳ್ಳಿ – ಪುಣೆ ಮಧ್ಯೆ 2ನೇ ವಂದೇ ಭಾರತ್ ರೈಲು ಆರಂಭಿಸುವ ಶುಭ ಸಂದೇಶ ನೀಡಿದ್ದಾರೆ.
ಕ್ಯಾನ್ಸರ್ ಔಷಧಿಗಳ ಮೇಲಿನ ಜಿಎಸ್ಟಿ ದರ ಕಡಿತಕ್ಕೆ ನಿರ್ಧಾರ: ನಿರ್ಮಲಾ ಸೀತಾರಾಮನ್!
ಶೀಘ್ರದಲ್ಲೇ ಹುಬ್ಬಳ್ಳಿ-ಪುಣೆ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭಿಸುವುದಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಧಾರವಾಡ ಸಂಸದರೂ ಆಗಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮಾಹಿತಿ ನೀಡಿದ್ದಾರೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಹುಬ್ಬಳ್ಳಿ-ಪುಣೆ ಮಧ್ಯೆ ವಂದೇ ಭಾರತ್ ರೈಲು ಸಂಚಾರಕ್ಕೆ ಕ್ರಮ ಕೈಗೊಳ್ಳುವಂತೆ ಅಶ್ವಿನಿ ವೈಷ್ಣವ್ ಅವರಿಗೆ ಜುಲೈ ಮೊದಲ ವಾರದಲ್ಲಷ್ಟೇ ಪತ್ರ ಬರೆದು ಮನವಿ ಮಾಡಿದ್ದರು. ರಾಜ್ಯದಲ್ಲಿ ಬೆಂಗಳೂರು ನಂತರ ಪ್ರಮುಖ ವಾಣಿಜ್ಯ ನಗರಿ ಎಂಬ ಹೆಗ್ಗಳಿಕೆ ಹುಬ್ಬಳ್ಳಿ-ಧಾರವಾಡ ಅವಳಿ ನಗರಕ್ಕಿದೆ. ಅಲ್ಲದೇ, ವಂದೇ ಭಾರತ್ ರೈಲು ಸಂಚಾರದಿಂದ ಈ ಭಾಗದ ವಾಣಿಜ್ಯೋದ್ಯಮ, ಕೈಗಾರಿಕಾ ವಸಾಹತು ಬೆಳವಣಿಗೆಗೆ ಅನುಕೂಲ ಆಗುತ್ತದೆ ಎಂದು ಸಚಿವ ಜೋಶಿ ಕೇಂದ್ರದ ಗಮನ ಸೆಳೆದಿದ್ದರು.
ಹುಬ್ಬಳ್ಳಿಯಿಂದ ಮುಂಬೈ ಸಂಪರ್ಕಕ್ಕೂ ಈ ಮಾರ್ಗ ಅತ್ಯಂತ ಪ್ರಮುಖವಾಗಲಿದೆ ಎಂಬುದನ್ನು ಜೋಶಿ ಅವರು ರೈಲ್ವೆ ಸಚಿವರಿಗೆ ಮನವರಿಕೆ ಮಾಡಿಕೊಟ್ಟು ವಂದೇ ಭಾರತ್ ರೈಲು ಸಂಚಾರ ಆರಂಭಕ್ಕೆ ಒತ್ತಾಯಿಸಿದ್ದರು. ಹುಬ್ಬಳ್ಳಿ-ಧಾರವಾಡದ ಜನರಿಗೆ ಹಬ್ಬದ ಈ ಶುಭ ಸಂದರ್ಭದಲ್ಲಿ ವಂದೇ ಭಾರತ್ ರೈಲು ಸಂಚಾರ ಸಿಹಿ ಸುದ್ದಿಯಾಗಿದ್ದು, ಶೀಘ್ರದಲ್ಲಿಯೇ ಹುಬ್ಬಳ್ಳಿ – ಪುಣೆ ನಡುವೆ ಹುಬ್ಬಳ್ಳಿಯ 2ನೇ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚರಿಸಲಿದೆ ಎಂದು ಸಚಿವ ಜೋಶಿ ಟ್ವೀಟ್ ಮೂಲಕ ಸಂತಸ ಹಂಚಿಕೊಂಡಿದ್ದಾರೆ.