ಬೆಂಗಳೂರು: ವಿಧಾನಮಂಡಲದಲ್ಲಿ ಅನುಮೋದನೆ ಪಡೆದಿದ್ದ 3 ವಿಧೇಯಕಗಳಿಗೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ.
ಕರ್ನಾಟಕ ಸಾರ್ವಜನಿಕ ಪರೀಕ್ಷಾ (ಭ್ರಷ್ಟಾಚಾರ) ವಿಧೇಯಕ, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಕರ್ನಾಟಕ ಪುರಸಭೆಗಳು ಹಾಗೂ ಇತರೆ ಕಾನೂನು ವಿಧೇಯಕಕ್ಕೆ ರಾಜ್ಯಪಾಲರು ಸೋಮವಾರ ಸಹಿ ಹಾಕಿದ್ದಾರೆ.
ಕೆಲವು ಸ್ಪಷ್ಟನೆ ಕೇಳಿ ವಿಧೇಯಕಗಳನ್ನು ರಾಜ್ಯಪಾಲರು ವಾಪಾಸ್ ಕಳುಹಿಸಿದ್ದರು. ಸರ್ಕಾರದ ಸ್ಪಷ್ಟನೆ ನಂತರ ವಿಧೇಯಕಗಳಿಗೆ ಅಂಕಿತ ಸಿಕ್ಕಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
11 ವಿಧೇಯಕಗಳ ಪೈಕಿ 3 ವಿಧೇಯಕಗಳಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಇನ್ನೂ 8 ವಿಧೇಯಕಗಳಿಗೆ ರಾಜ್ಯಪಾಲರ ಅನುಮೋದನೆ ಪಡೆಯುವುದು ಬಾಕಿ ಇದೆ.