ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನಂತೆ 2030ರ ವೇಳೆಗೆ 30% ರಷ್ಟು ಎಲೆಕ್ಟ್ರಿಕ್ ವಾಹನಗಳನ್ನು ಬಳಕೆ ಮಾಡಲು ಗುರಿ ನಿಗದಿಪಡಿಸಲಾಗಿದ್ದು, ಆ ಗುರಿ ಮುಟ್ಟಲು ಸರ್ವ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ವಿಶ್ವ EV ದಿನ ಅಂಗವಾಗಿ ಭಾರತೀಯ ಅಟೋಮೊಬೈಲ್ ಸೊಸೈಟಿ ಹಮ್ಮಿಕೊಂಡಿದ್ದ ಎರಡನೇ ಆವೃತ್ತಿಯ ಎಲೆಕ್ಟ್ರಿಕ್ ವಾಹನಗಳ ರಾಲಿಯನ್ನು ಸಚಿವರು ನವದೆಹಲಿಯ ಭಾರತ್ ಮಂಟಪದಲ್ಲಿ ಉದ್ಘಾಟಿಸುವ ಮುನ್ನ ಮಾತನಾಡಿದರು. ಪ್ರಧಾನಿಗಳು ನಿಗದಿಪಡಿಸಿರುವ ಗುರಿ ಮುಟ್ಟಲು ಈಗಾಗಲೇ ಅನೇಕ ನೀತಿಗಳನ್ನು ರೂಪಿಸಲಾಗಿದ್ದು,
ಗಡಿಬಿಡಿಯಲ್ಲಿ ಗರ್ಭ ನಿರೋಧಕ ಮಾತ್ರೆಯನ್ನು ಹೀಗೆಲ್ಲಾ ತಿನ್ಬೇಡಿ: ಇಲ್ಲದಿದ್ರೆ ಪ್ರಾಣಕ್ಕೆ ಆಪತ್ತು!
ಹಲವಾರು ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಎಲೆಕ್ಟ್ರಿಕ್ ವಾಹನ (EV) ಉದ್ಯಮವೂ ಭಾರತದಲ್ಲಿ ವೆಗಗತಿಯಲ್ಲಿ ಬೆಳೆಯುತ್ತಿದೆ ಎಂದು ಅವರು ಹೇಳಿದರು. ಪರಿಸರಕ್ಕೆ ಪೂರಕವಾದ ರೀತಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ತಯಾರಿಕೆಗೆ ಸರ್ಕಾರ ಪ್ರೋತ್ಸಾಹ ನೀಡುತ್ತಿದ್ದು, ಗ್ರಾಹಕರಿಗೆ ಸುಲಭವಾಗಿ ಕೈಗೆಟುಕುವಂತೆ ಕ್ರಮ ವಹಿಸಲಾಗಿದೆ ಎಂದರು.
ಮುಂದಿನ ಪೀಳಿಗೆಯ ಇಂಧನ ಕ್ಷಮತೆ ತಂತ್ರಜ್ಞಾನ ಅಭಿವೃದ್ಧಿಗೆ ಒತ್ತು ನೀಡುವ ಹಿನ್ನೆಲೆಯಲ್ಲಿ ಸುಧಾರಿತ ಬ್ಯಾಟರಿ ಸೆಲ್ಗಳಿಗೆ (ACC) ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್ ((PLI) ಯೋಜನೆಯನ್ನು ಜಾರಿ ಮಾಡಲಾಗಿದೆ ಎಂದ ಸಚಿವರು; ₹18,100 ಕೋಟಿ ಗುರಿಯ ಅನುದಾನ ಹೊಂದಿರುವ ಈ ಯೋಜನೆಯು 50 ಗಿಗಾ ವ್ಯಾಟ್-ಗೋಚಾರ್ (GWh) ಉತ್ಪಾದನಾ ಸಾಮರ್ಥ್ಯವನ್ನು ಹೊಂದಲು ಉದ್ದೇಶಿಸಲಾಗಿದೆ. ಮೂರು ಕಂಪನಿಗಳು ಈಗಾಗಲೇ 30 GWh ನೀಡಲು ಸಾಮರ್ಥ್ಯ ಹೊಂದಿವೆ ಎಂದರು.