ಬೆಂಗಳೂರು:- ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ ಅನುದಾನವನ್ನು ಕೇಂದ್ರ ತಕ್ಷಣವೇ ಬಿಡುಗಡೆಗೊಳಿಸಲಿ ಎಂದು ಎಚ್.ಕೆ ಪಾಟೀಲ್ ಹೇಳಿದ್ದಾರೆ.
Arrest: ಕ್ರಿಪ್ಟೋ ಕರೆನ್ಸಿ ವರ್ಗಾಯಿಸಿ ವಂಚನೆ ಎಸಗಿದ ಆರೋಪಿ ಅರೆಸ್ಟ್!
ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನವನ್ನು ತಕ್ಷಣವೇ ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕು ಎಂದರು. 2023-24ನೇ ಸಾಲಿನ ಮುಂಗಡ ಪತ್ರದಲ್ಲಿ ಕೇಂದ್ರ ಸರ್ಕಾರವು ಘೋಷಿಸಿರುವಂತೆ ಬರ ಸಂಭವನೀಯ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನವನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದಿದ್ದಾರೆ.
ಕಳೆದ ವರ್ಷ ಫೆ.01 ರಂದು ಕೇಂದ್ರ ಸರ್ಕಾರದ 2023-24ನೇ ಮುಂಗಡ ಪತ್ರದ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ರವರು ಘೋಷಣೆ ಮಾಡಿದ್ದರು. ಕೇಂದ್ರ ಸರ್ಕಾರದಿಂದ ರಾಷ್ಟ್ರೀಯ ಯೋಜನೆ ಘೋಷಣೆಗೆ ಎಲ್ಲಾ ಅರ್ಹತೆಗಳನ್ನು ಪಡೆದು, ಎಲ್ಲಾ ಷರತ್ತುಗಳನ್ನು ಪೂರೈಸಿ, ಅನುಮೋದನೆಗೊಂಡಿರುತ್ತವೆ ಎಂದು ತಿಳಿಸಿದ್ದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮುಂಗಡ ಪತ್ರದ ಭಾಷಣದಲ್ಲಿ ತಾನೇ ಘೋಷಿಸಿದ ಘೋಷಣೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ಕಿಡಿಕಾರಿದರು.
ಕರ್ನಾಟಕ ಸರ್ಕಾರ ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರು 2024ರ ಜು.19, ಆ.03 ಹಾಗೂ ಆ.06 ರಂದು ಬರೆದ ಪತ್ರಕ್ಕೆ ಉತ್ತರ ಬರೆದ ಕೇಂದ್ರ ಜಲಶಕ್ತಿ ಸಚಿವಾಲಯದ ಜಲಸಂಪನ್ಮೂಲ, ನದಿ ಅಭಿವೃದ್ಧಿ ಹಾಗೂ ಗಂಗಾ ಪುನರುಜ್ಜೀವನ ಇಲಾಖೆಯ ಕಾರ್ಯದರ್ಶಿ ದೇಬಶ್ರೀ ಮುಖರ್ಜಿಯವರು ಹಾರಿಕೆಯ ಉತ್ತರ ನೀಡಿದ್ದಾರೆ.
ಕೇಂದ್ರದ ನಿಯಮಗಳು ಮತ್ತು ಷರತ್ತುಗಳಂತೆ ಎಲ್ಲಾ ಹಂತಗಳಲ್ಲೂ ಅನುಮೋದನೆಗೊಂಡು ಮುಂಗಡ ಪತ್ರದಲ್ಲಿ ಘೋಷಣೆಯಾಗಿದೆ. ಆದರೆ ಈ ಯೋಜನೆಗೆ ಈಗ ನಿರಾಕರಿಸುತ್ತಿರುವುದು ಒಕ್ಕೂಟ ವ್ಯವಸ್ಥೆಯ ಉನ್ನತ ಸಂಪ್ರದಾಯಗಳಿಗೆ ಮತ್ತು ನಿಯಮಗಳಿಗೆ ತದ್ವಿರುದ್ಧವಾಗಿದೆ
ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಸರ್ಕಾರಗಳು ಯಾವ ಪಕ್ಷದ್ದೇ ಆಗಿರಲಿ ಪಕ್ಷಪಾತ ರಹಿತವಾಗಿರಬೇಕು. ಜನಹಿತ ಕಾಪಾಡುವ ಮೌಲ್ಯಗಳಿಗೆ ಕೇಂದ್ರದ ಬಿ.ಜೆ.ಪಿ ಸರ್ಕಾರ ತಿಲಾಂಜಲಿ ಇಡುತ್ತಿದೆ. ಕರ್ನಾಟಕ ಸರ್ಕಾರದ ಮಹತ್ವದ ಯೋಜನೆಗೆ 5,300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ್ದಾರೆ