ವಾಷಿಂಗ್ಟನ್:- ಅಮೆರಿಕಾ ಪ್ರವಾಸದಲ್ಲಿರುವ ಡಿಕೆ ಶಿವಕುಮಾರ್, ಈಗಾಗಲೇ ಅಮೆರಿಕಾದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನ ಮಂಗಳವಾರ ವಾಷಿಂಗ್ಟನ್ನಲ್ಲಿ ಕುಟುಂಬ ಸಮೇತರಾಗಿ ಭೇಟಿಯಾಗಿದ್ದಾರೆ.
Rain News: ಇಂದು ಕರ್ನಾಟಕದ ಕರಾವಳಿ & ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಸಾಧ್ಯತೆ!
ರಾಹುಲ್ ಗಾಂಧಿ ಕೂಡ 3 ದಿನಗಳ ಅಮೆರಿಕಾ ಪ್ರವಾಸದಲ್ಲಿದ್ದಾರೆ. ಉಭಯ ರಾಷ್ಟ್ರಗಳ ನಡುವಿನ ಬಾಂಧವ್ಯ ಬಲಪಡಿಸಲು ಅರ್ಥಪೂರ್ಣ ಚರ್ಚೆಯಲ್ಲಿ ತೊಡಗಿಸಿಕೊಳ್ಳುವ ನಿರೀಕ್ಷೆಯನ್ನು ರಾಹುಲ್ ಗಾಂಧಿ ವ್ಯಕ್ತಪಡಿಸಿದ್ದಾರೆ.
ಆದರೆ ಇಡೀ ಪ್ರವಾಸದಲ್ಲಿ ಹಲವಾರು ಸಂವಾದದಲ್ಲಿ ಪಾಲ್ಗೊಂಡಿರುವ ರಾಹುಲ್ ಗಾಂಧಿ ಬಿಜೆಪಿ, ಆರ್ಎಸ್ಎಸ್ ಹಾಗೂ ಮೋದಿ ವಿರುದ್ಧ ತಮ್ಮ ವಾಗ್ದಾಳಿಯನ್ನ ಮುಂದುವರಿಸಿದ್ದಾರೆ.
ರಾಜ್ಯದಲ್ಲಿ ಮುಡಾ ಪ್ರಕರಣ ಹೆಚ್ಚು ಸದ್ದು ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಲಿದ್ದಾರೆ. ಕಳೆದ ತಿಂಗಳಿನಿಂದ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ಸಿಎಂ ವಿರುದ್ಧವೇ ಮುಡಾ ಅಕ್ರಮ ಕೇಳಿಬಂದಿರುವುದರಿಂದ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯ ಕೇಳಿಬರುತ್ತಿದೆ.
ಒಂದು ಕಡೆ ವಿಪಕ್ಷಗಳು ಸಿಎಂ ರಾಜೀನಾಮೆಗೆ ಒತ್ತಾಯ ಮಾಡುತ್ತಿದ್ದಂತೆ ಇತ್ತ ಕಾಂಗ್ರೆಸ್ ನಾಯಕರು ಒಬ್ಬಬ್ಬರಾಗಿ ಸಿಎಂ ಹುದ್ದೇಗೇರಲು ತಾವೂ ಆಕಾಂಕ್ಷಿಗಳೆಂದು ಹೇಳಿಕೊಳ್ಳುತ್ತಿದ್ದಾರೆ. ದೇಶಪಾಂಡೆ, ಎಂಬಿ ಪಾಟೀಲ್ ಹಾಗೂ ಸತೀಶ್ ಜಾರಕಿ ಹೊಳಿ, ಹೀಗೆ ಒಬ್ಬಬ್ಬರಾಗಿ ಸಿಎಂ ಖುರ್ಚಿ ಮೇಲೆ ಕಣ್ಣಾಯಿಸುತ್ತಿದ್ದಾರೆ.
ಈ ಮಧ್ಯೆ ರಾಹುಲ್ ಗಾಂಧಿಯನ್ನ ಅಮೆರಿಕಾದಲ್ಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನ ಭೇಟಿ ಮಾಡಿರುವುದು ಅಚ್ಚರಿಯನ್ನುಂಟು ಮಾಡಿದೆ