ಬೆಂಗಳೂರು:- ಕರ್ನಾಟಕದ ಹಲವೆಡೆ ಮುಂದಿನ 48 ಗಂಟೆಯಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.
ಯಾರು ಎಷ್ಟೇ ಬೊಬ್ಬೆ ಹೊಡೆದರೂ ನಾನೇ ಸಿಎಂ: ಸಿದ್ದರಾಮಯ್ಯ ಖಡಕ್ ಹೇಳಿಕೆ!
ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದ್ದು, ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಜೊತೆ ಮಳೆ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗುವ ಸಂಭವವಿದೆ. ಇನ್ನು ತಾಪಮಾನ ಗರಿಷ್ಠ 30 ಡಿಗ್ರಿ, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಕರ್ನಾಟಕದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 14ರವರೆಗೆ ಹೆಚ್ಚಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರದಲ್ಲಿ ಮಳೆಯಾಗುವ ಸಾಧ್ಯತೆ ಇರಲಿದೆ.