ಮಂಡ್ಯ :- ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ಮಾಡಿದ ಆರೋಪ ಕೇಳಿಬಂದಿದ್ದು, ಪೊಲೀಸ್ ಠಾಣೆ ಎದುರು ಗಣಪತಿ ಮೂರ್ತಿ ನಿಲ್ಲಿಸಿ ಹಿಂದೂಗಳು ಪ್ರತಿಭಟನೆ ನಡೆಸಿದ ಘಟನೆ ಮಂಡ್ಯದ ನಾಗಮಂಗಲದ ಬದರಿಕೊಪ್ಪಲಿನಲ್ಲಿ ಜರುಗಿದೆ.
ಭಾರತದ ಮಾನ ಹರಾಜು ಹಾಕ್ತಿರುವ ರಾಹುಲ್ ಗಾಂಧಿ: ಪ್ರಹ್ಲಾದ್ ಜೋಶಿ ವಾಗ್ದಾಳಿ!
ನಾಗಮಂಗಲದ ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಮೆರವಣಿಗೆ ಬಂದ ವೇಳೆ ಅನ್ಯಕೋಮಿನ ಯುವಕರು ಕಲ್ಲುತೂರಾಟ ನಡೆಸಿದ್ದಾರೆ.
ಈ ವೇಳೆ ಹಿಂದೂ-ಮುಸ್ಲಿಂ ಯುವಕರ ನಡುವೆ ವಾಕ್ಸಮರ, ತಳ್ಳಾಟ ನೂಕಾಟವಾಗಿದ್ದು, ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಹರಸಾಹಸ ನಡೆಸಿದ್ದಾರೆ. ಬಳಿಕ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕಾಗಿ ಆಗ್ರಹಿಸಿ ಪೊಲೀಸ್ ಠಾಣೆ ಎದುರು ಗಣೇಶ ಮೂರ್ತಿ ನಿಲ್ಲಿಸಿ ಹಿಂದೂಗಳು ಪ್ರತಿಭಟನೆ ನಡೆಸಿದ್ದಾರೆ.