ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ಗೆ ನೀಡಿರುವ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ಅಂತಿಮ ಹಂತದ ವಿಚಾರಣೆ ಇಂದು ಹೈಕೋರ್ಟ್ನಲ್ಲಿ ನಡೆಯಲಿದ್ದು, ಇದು ಸಿದ್ದು ಪಾಲಿಗೆ ನಿರ್ಣಾಯಕವಾಗಲಿದೆ.
ರಿಲೀಸ್ ಗೆ ರೆಡಿಯಾದ ಶ್ರೀಮುರುಳಿ ನಟನೆಯ ‘ಬಘೀರ’: ಬಿಡುಗಡೆ ದಿನಾಂಕ ಘೋಷಿಸಿದ ಹೊಂಬಾಳೆ ಪ್ರೊಡಕ್ಷನ್
ಇಂದು ಸಿದ್ದರಾಮಯ್ಯ ಪರ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಲಿದ್ದು, ಕುತೂಹಲ ಕೆರಳಿಸಿದೆ. ಸೋಮವಾರ ವಾದ ಮಂಡಿಸಿದ್ದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಸರ್ಕಾರದ ಪರವಾಗಿ ಪ್ರಬಲ ವಾದ ಮಂಡಿಸಿದ್ದರು. 17ಎ ಅಡಿ ಪ್ರಾಸಿಕ್ಯೂಷನ್ಗೆ ಪೊಲೀಸರು ಅನುಮತಿ ಕೇಳಬಹುದು, ಅದಕ್ಕೂ ಮೊದಲು ತನಿಖಾಧಿಕಾರಿ ಪ್ರಾಥಮಿಕ ತನಿಖೆ ನಡೆಸಬೇಕು, ಪ್ರಾಥಮಿಕ ತನಿಖೆಯ ವಿವರವನ್ನು ಸಕ್ಷಮ ಪ್ರಾಧಿಕಾರಕ್ಕೆ ನೀಡಬೇಕು. ವಿಚಾರಣೆ, ತನಿಖೆಗೂ ಮುನ್ನ 17ಎ ಅನುಮತಿ ಬೇಕಲ್ಲವೇ ಎಂದು ಪ್ರಶ್ನಿಸಿದ್ದರು.
17ಎ ಅಡಿ ರಾಜ್ಯಪಾಲರೇ ಪ್ರಾಥಮಿಕ ತನಿಖೆ ನಡೆಸುವಂತಿಲ್ಲ, ತನಿಖಾಧಿಕಾರಿಯಂತೆ ರಾಜ್ಯಪಾಲರು ವರ್ತಿಸುವಂತಿಲ್ಲ. ರಾಜ್ಯಪಾಲರು ಅನುಸರಿಸಿದ ಪ್ರಕ್ರಿಯೆಗೆ ಕಾನೂನಿನಡಿ ಅವಕಾಶವಿಲ್ಲ. ರಾಜ್ಯಪಾಲರು ಖಾಸಗಿ ದೂರುದಾರರಿಗೆ ಅವಕಾಶವನ್ನೇ ನೀಡಬಾರದಿತ್ತು. ಖಾಸಗಿ ದೂರುದಾರರ ಮನವಿಯನ್ನು ರಾಜ್ಯಪಾಲರು ಹಿಂತಿರುಗಿಸಬೇಕಿತ್ತು ಎಂದು ಅವರು ವಾದಿಸಿದ್ದರು. ಶಶಿಕಿರಣ್ ಶೆಟ್ಟಿ ವಾದ ಮುಗಿಯುತ್ತಿದ್ದಂತೆ ಸ್ನೇಹಮಯಿ ಕೃಷ್ಣ ಪರ ವಕೀಲೆ ಲಕ್ಷ್ಮೀ ಅಯ್ಯಂಗಾರ್, ಪ್ರಕರಣದಲ್ಲಿ ಸಿಎಂ ಪಾತ್ರ ಇರೋದಾಗಿ ವಾದ ಮುಂದಿಟ್ಟಿದ್ದರು.