ಲಕ್ನೋ: ಜಗತ್ತಿನ ಪ್ರತಿಯೊಂದು ಸಾಧನಗಳಲ್ಲಿಯೂ ಭಾರತ ನಿರ್ಮಿತ ಚಿಪ್ ಇರಬೇಕೆನ್ನುವುದು ನಮ್ಮ ಕನಸು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು. ಮೂರು ದಿನಗಳ ಕಾಲ ನಡೆಯಲಿರುವ ಉತ್ತರಪ್ರದೇಶದ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್ಪೋ ಮಾರ್ಟ್ನಲ್ಲಿ ನಡೆದ 2024ರ ಸೆಮಿಕಾನ್ ಇಂಡಿಯಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಚಿಪ್ಗಳು ಕೇವಲ ತಂತ್ರಜ್ಞಾನದ ರೂಪವಾಗಿರಬಾರದು. ಅದು ಜನರ ಆಸೆಗಳನ್ನು ಈಡೇರಿಸುವ ಮಾಧ್ಯಮವಾಗಬೇಕು ಎಂದು ತಿಳಿಸಿದರು. ಈ ಕಾರ್ಯಕ್ರಮ ಭಾರತದ ಸೆಮಿಕಂಡಕ್ಟರ್ ಸಾಮರ್ಥ್ಯ ಹಾಗೂ ಪ್ರದರ್ಶಿಸುವ ಗುರಿಯನ್ನು ಹೊಂದಿದೆ. ಸೆಮಿಕಂಡಕ್ಟರ್ ಉತ್ಪಾದನೆಗೆ ದೇಶವನ್ನು ಜಾಗತಿಕ ಕೇಂದ್ರವಾಗಿಸುವ ಉದ್ದೇಶವನ್ನು ಹೊಂದಿದೆ ಎಂದರು.
ಇಂತಹ ದೊಡ್ಡಮಟ್ಟದ ಕಾರ್ಯಕ್ರಮ ನಿಯೋಜಿಸುವಲ್ಲಿ ಭಾರತ ವಿಶ್ವದಲ್ಲೇ 8ನೇ ಸ್ಥಾನದಲ್ಲಿದೆ. 2028ರ ವೇಳೆಗೆ ಸೆಮಿಕಂಡಕ್ಟರ್ ಮಾರುಕಟ್ಟೆಯು 8,030 ಕೋಟಿ ತಲುಪಲಿದ್ದು, 85,000 ಉದ್ಯೋಗಗಳನ್ನು ಸೃಷ್ಟಿಸುತ್ತದೆ. ಇದಕ್ಕಾಗಿ 1.4 ಲಕ್ಷ ಕೋಟಿಗೂ ಅಧಿಕ ಹೂಡಿಕೆ ಮಾಡಲಾಗಿದ್ದು, ಹಲವು ಯೋಜನೆಗಳು ಪ್ರಗತಿಯಲ್ಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಮಾತನಾಡಿ, ಸೆಮಿಕಂಡಕ್ಟರ್ ವಿಶ್ವಕ್ಕೆ ಶೇ.20ರಷ್ಟು ಕೊಡುಗೆಯನ್ನು ನೀಡುತ್ತವೆ. ಈ ಕಾರಣದಿಂದ ಮುಂದಿನ 10 ವರ್ಷಗಳಲ್ಲಿ 85,000 ಇಂಜಿನಿಯರ್ ಹಾಗೂ ತಂತ್ರಜ್ಞರ ಮೂಲಕ ಅಭಿವೃದ್ಧಿಪಡಿಸಲು ಸರ್ಕಾರ ಸಿದ್ಧವಾಗಿದೆ ಎಂದರು.