ಬೆಂಗಳೂರು: ಮನೆಗಳವು ಮಾಡುತ್ತಿದ್ದ ಕುಖ್ಯಾತ ಆರೋಪಿಯನ್ನು ಬಂಧಿಸುವಲ್ಲಿ ಬ್ಯಾಡರಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ರಿಯಾನ್ @ ನಾಗರಾಜ್ ಬಂಧಿತ ಆರೋಪಿಯಾಗಿದ್ದು, ಬಂಧಿತನಿಂದ 09 ಮನೆಗಳವು ಪ್ರಕರಣ ಬೆಳಕಿಗೆ ಬಂದಿದೆ.
ರೈತ ಸಮುದಾಯಕ್ಕೆ ಗುಡ್ ನ್ಯೂಸ್: ಮಿನಿ ಟ್ರ್ಯಾಕ್ಟರ್ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ!
ಸಿದ್ದಾಪುರ ನಿವಾಸಿ ಆಗಿರುವ ಆರೋಪಿ ರಿಯಾನ್, ಟಿವಿ ಡಿಶ್ ರಿಪೇರಿ ಮಾಡುವ ನೆಪದಲ್ಲಿ ಒಂಟಿ ಮನೆಗಳನ್ನ ಟಾರ್ಗೆಟ್ ಮಾಡಿ ಮನೆ ಕಳ್ಳತನ ಮಾಡುತ್ತಿದ್ದನು. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು 20 ಲಕ್ಷ ಮೌಲ್ಯದ 300 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.