ಬೆಂಗಳೂರು: ಹಿಂದಿ ದಿವಸ್ ಅನ್ನು ಕರಾಳ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿಎ ನಾರಾಯಣಗೌಡ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ ಗೌಡ ಅವರು, ಹಿಂದಿ ಹೇರಿಕೆ ದೇಶದ ಏಕತೆ ಮತ್ತು ಸಮಗ್ರತೆಗೆ ಧಕ್ಕೆ ಉಂಟು ಮಾಡುತ್ತಿದೆ. ಈ ಮೂಲಕ ದೇಶವನ್ನು ಒಡೆಯುವ ಹುನ್ನಾರ ನಡೆಸುತ್ತಿದೆ.
ಭಾರತದ ಭೌಗೋಳಿಕ, ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ, ಭಾಷಿಕ ವೈವಿಧ್ಯತೆಯನ್ನು ಹಾಳು ಮಾಡಲು ಹಿಂದಿ ಸಾಮ್ರಾಜ್ಯಶಾಹಿಗಳು ನಿರಂತರವಾಗಿ ಪ್ರಯತ್ನಿಸುತ್ತಿರುವುದು ಖಂಡನೀಯ ಎಂದಿದ್ದಾರೆ. ಕೇಂದ್ರ ಸರ್ಕಾರ ಈ ಕೂಡಲೇ ಸಂವಿಧಾನಕ್ಕೆ ತಿದ್ದುಪಡಿ ತಂದು ಸಂವಿಧಾನದ 8ನೇ ಪರಿಚ್ಛೇದದಲ್ಲಿ ಉಲ್ಲೇಖಿಸಿರುವ
Viagra: ಗಮನಿಸಿ.. ಈ ಸಮಸ್ಯೆ ಇರುವ ಪುರುಷರು ವಯಾಗ್ರ ತೆಗೆದುಕೊಳ್ಳಬಾರದು ಗೊತ್ತಾ..?
ಎಲ್ಲ 22 ಭಾಷೆಗಳನ್ನೂ ಅಧಿಕೃತ, ಆಡಳಿತ ಭಾಷೆಗಳನ್ನಾಗಿ ಮಾಡಿ ಈ ದೇಶದ ಬಹುತ್ವ, ಸಾರ್ವಭೌಮತೆಯನ್ನು ಕಾಪಾಡಬೇಕು. ಹಿಂದಿಗೆ ಅನೈತಿಕವಾಗಿ ಮನ್ನಣೆ ನೀಡುವ ಸಂವಿಧಾನದ 343ರಿಂದ 351ನೇ ವಿಧಿಗಳನ್ನು ರದ್ದುಪಡಿಸಿ ಎಲ್ಲ ಭಾಷೆಗಳೂ ಒಕ್ಕೂಟದ ದೃಷ್ಟಿಯಲ್ಲಿ ಸಮಾನ ಎಂದು ಸಾರಬೇಕು ಎಂದು ಆಗ್ರಹಿಸಿದ್ದಾರೆ.