ದಕ್ಷಿಣ ಭಾರತದ ಖ್ಯಾತ ನಟಿ ನಯನತಾರಾ ಅವರ ಎಕ್ಸ್ (ಟ್ವಿಟರ್) ಖಾತೆ ಹ್ಯಾಕ್ ಆಗಿದೆ. ಈ ಬಗ್ಗೆ ಪೋಸ್ಟ್ ಶೇರ್ ಮಾಡಿರುವ ಅವರು ಅನಗತ್ಯ ಟ್ವೀಟ್ಸ್ ನಿರ್ಲಕ್ಷಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
ಹ್ಯಾಕ್ ಆಗಿರುವ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಶೇರ್ ಮಾಡಿರುವ ನಟಿ, ”ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಯಾವುದೇ ಅನಗತ್ಯ ಅಥವಾ ವಿಚಿತ್ರ ಟ್ವೀಟ್ಗಳು ಬಂದರೆ ಅವುಗಳನ್ನು ದಯವಿಟ್ಟು ನಿರ್ಲಕ್ಷಿಸಿ” ಎಂದು ಬರೆದುಕೊಂಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸಕ್ರಿಯರಾಗಿರದ ನಯನತಾರಾ 2023ರ ಆಗಸ್ಟ್ 31ಕ್ಕೆ ಇನ್ಸ್ಟಾಗ್ರಾಮ್ಗೆ ಎಂಟ್ರಿ ಕೊಟ್ಟರು. ಅಂದೇ ಮೊದಲ ಬಾರಿಗೆ ತಮ್ಮ ಅವಳಿ ಮಕ್ಕಳ ಮುಖವನ್ನು ವಿಡಿಯೋ ಮೂಲಕ ರಿವೀಲ್ ಮಾಡಿದ್ರು. ಈ ಜನಪ್ರಿಯ ಸೋಷಿಯಲ್ ಮೀಡಿಯಾ ಪ್ಲ್ಯಾಟ್ಫಾರ್ಮ್ನಲ್ಲಿ 8.9 ಮಿಲಿಯನ್ ಫಾಲೋವರ್ಸ್ ಸಂಪಾದಿಸಿರುವ ಅವರು ಈವರೆಗೆ 119 ಪೋಸ್ಟ್ಗಳನ್ನು ಶೇರ್ ಮಾಡಿದ್ದಾರೆ.
ನಯನತಾರಾ ಕೊನೆಯದಾಗಿ ‘ಅನ್ನಪೂರ್ಣಿ’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ‘ಮನ್ನಂಗಟ್ಟಿ: ಸಿನ್ಸ್ 1960’ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಮುಂದಿನ ಸಿನಿಮಾ ಇನ್ನೂ ಅಧಿಕೃತವಾಗಿ ಘೋಷಣೆಯಾಗಿಲ್ಲ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ಈ ಹಿಂದೆ ಟಾಕ್ಸಿಕ್ ಅಖಾಡಕ್ಕೆ ದಕ್ಷಿಣ ಚಿತ್ರರಂಗದ ಖ್ಯಾತ ನಟಿ ನಯನತಾರಾ ಎಂಟ್ರಿ ಕೊಡಲಿದ್ದಾರೆ ಎಂದು ಹೇಳಲಾಗುತ್ತಿದೆ.