ಪಾಟ್ನಾ:- ಬಿಹಾರದ ಹಮ್ಸಫರ್ ಎಕ್ಸ್ಪ್ರೆಸ್ನಲ್ಲಿ 11 ವರ್ಷದ ಬಾಲಕಿ ಮೇಲೆ 34 ವರ್ಷದ ರೈಲ್ವೇ ಸಿಬ್ಬಂದಿ ದೌರ್ಜನ್ಯ ಎಸಗಿರುವ ಘಟನೆ ಜರುಗಿದೆ.
ರಾಹುಲ್ ಗಾಂಧಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಬಿಜೆಪಿ ಕಾರ್ಯಕರ್ತರ ಆಕ್ರೋಶ!
ಆರೋಪಿ ರೈಲ್ವೇ ಸಿಬ್ಬಂದಿಯನ್ನು ಪ್ರಶಾಂತ್ ಕುಮಾರ್ ಎಂದು ಗುರುತಿಸಲಾಗಿದ್ದು, ಬಳಿಕ ಪ್ರಯಾಣಿಕರು ಹಾಗೂ ಕುಟುಂಬದವರ ಹೊಡೆತಕ್ಕೆ ಸಾವನ್ನಪ್ಪಿದ್ದಾನೆ. ಲಕ್ನೋ ಮತ್ತು ಕಾನ್ಪುರಗೆ ಪ್ರಯಾಣಿಸುತ್ತಿದ್ದ ಹಮ್ಸಫರ್ ಎಕ್ಸ್ಪ್ರೆಸ್ ರೈಲಿನಲ್ಲಿ 11 ವರ್ಷದ ಬಾಲಕಿ ಮೇಲೆ 34 ವರ್ಷದ ರೈಲ್ವೇ ಸಿಬ್ಬಂದಿ ದೌರ್ಜನ್ಯ ಎಸಗಿದ್ದಾನೆ.
ಸಂತ್ರಸ್ತೆಯ ತಾಯಿ ಹೊರಗೆ ಹೋಗಿದ್ದಾಗ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಳಿಕ ಬಾಲಕಿ ತನ್ನ ತಾಯಿಗೆ ನಡೆದ ವಿಷಯವನ್ನು ಹೇಳಿದ್ದಾಳೆ. ಇದರಿಂದ ಆಕೆಯ ಕುಟುಂಬದವರು ಹಾಗೂ ಪ್ರಯಾಣಿಕರು ಸೇರಿ ಆರೋಪಿಗೆ ಹಿಗ್ಗಾಮುಗ್ಗಾ ಬಾರಿಸಿದ್ದಾರೆ.
ಕಾನ್ಪುರದ ಜಿಆರ್ಪಿ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಆರೋಪಿ ಮೇಲೆ ಪೋಕ್ಸೋ ಕೇಸ್ ದಾಖಲಿಸಲಾಗಿತ್ತು. ಆದರೆ ಹೊಡೆತಕ್ಕೊಳಗಾದ್ದರಿಂದ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವನು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.