ಹಾಸನ:- ಜಿಲ್ಲೆಯ ಚೀಕನಹಳ್ಳಿ ಗ್ರಾಮದಲ್ಲಿ ಪಾನಮತ್ತನಾಗಿ ಬಂದ ರೌಡಿಶೀಟರ್ ವಾಟರ್ಮ್ಯಾನ್ಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಜರುಗಿದೆ.
Diamond League: ಫೈನಲ್ನಲ್ಲಿ ಚಿನ್ನದ ಹುಡುಗ ನೀರಜ್ ಚೋಪ್ರಾ: ಅಂತಿಮ ಹಣಾಹಣಿ ಯಾವಾಗ!?
27 ವರ್ಷದ ಗಣೇಶ್ ಕೊಲೆಯಾದ ವ್ಯಕ್ತಿ. ಚೀಕನಹಳ್ಳಿ ಗ್ರಾಮದಲ್ಲಿ ವಾಟರ್ಮ್ಯಾನ್ ಆಗಿದ್ದ ಗಣೇಶ್ ನಿನ್ನೆ ರಾತ್ರಿ ಗ್ರಾಮದ ಆಟೋ ನಿಲ್ದಾಣದ ಬಳಿ ನಿಂತಿದ್ದ. ಈ ವೇಳೆ ಕಂಠ ಪೂರ್ತಿ ಕುಡಿದು ಸ್ಥಳಕ್ಕೆ ಬಂದಿದ್ದ ರೌಡಿಶೀಟರ್ ಮಧು ಕ್ಷುಲ್ಲಕ ಕಾರಣಕ್ಕೆ ಗಣೇಶ್ ಜೊತೆ ಜಗಳ ತೆಗೆದಿದ್ದಾನೆ. ಬಳಿಕ ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತಿರುಗಿದೆ.
ಬಳಿಕ ಆರೋಪಿ ಚಾಕು ಇರಿದಿದ್ದಾನೆ. ತೀವ್ರ ರಕ್ತಸ್ರಾವದಿಂದ ಗಣೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹತ್ಯೆ ಬಳಿಕ ಆರೋಪಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಜಿಲ್ಲಾಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ