ಬೆಂಗಳೂರು:- ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮುನಿರತ್ನಗೆ ಬಿಜೆಪಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಮಾಧ್ಯಮದಲ್ಲಿ ನೀವು ಅವಹೇಳನಕಾರಿಯಾಗಿ ಮಾತನಾಡಿರುವಂತೆ ಪ್ರಸರಣಗೊತ್ತಿದೆ. ಇದಕ್ಕೆ ಕುರಿತಂತೆ ತಮ್ಮ ಮೇಲೆ ಎಫ್ಐಆರ್ ಕೂಡ ದಾಖಲಾಗಿದೆ. ಈ ತರಹದ ಘಟನೆ ಪಕ್ಷದ ಶಿಸ್ತಿಗೆ ಧಕ್ಕೆಯನ್ನುಂಟು ಮಾಡಿದೆ. ಹಾಗಾಗಿ ಈ ವಿಷಯಕ್ಕೆ ಸಂಬಂಧಿಸಿದಂತೆ ಐದು ದಿನಗಳ ಒಳಗಾಗಿ ಬಿಜೆಪಿ ಶಿಸ್ತು ಸಮಿತಿಯ ಮುಂದೆ ಸ್ಪಷ್ಠೀಕರಣ ನೀಡಬೇಕೆಂದು ನೋಟಿಸ್ ನೀಡಲಾಗಿದೆ.
ಒಂದು ಕಡೆ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದ್ದರೆ, ಇನ್ನೊಂದೆಡೆ ಶಾಸಕ ಮುನಿರತ್ನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಶೇಷಾದ್ರಿಪುರಂ ಎಸಿಪಿಗೆ ಕಾಂಗ್ರೆಸ್ ಪ್ರಚಾರ ಸಮಿತಿ ದೂರು ನೀಡಿದೆ. ಜಾತಿನಿಂದಕ ಮುನಿರತ್ನರನ್ನು ಬಂಧಿಸುವಂತೆ ಒತ್ತಾಯಿಸಲಾಗಿದೆ
ಹಣಕಾಸಿನ ವಿಚಾರವಾಗಿ ಚಲುವರಾಜು ಅವರನ್ನ ಮುನಿರತ್ನ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಎರಡು ಎಫ್ಐಆರ್ ದಾಖಲಾಗಿದ್ದು, ಮುನಿರತ್ನರನ್ನ ಬಂಧಿಸಲಾಗಿದೆ.