ನವದೆಹಲಿ: ಕರ್ನಾಟಕದಲ್ಲಿ ವಿಘ್ನನಿವಾರಕನ ಪೂಜೆಯಲ್ಲೂ ವಿಘ್ನಗಳನ್ನು ತಂದೊಡ್ಡುತ್ತಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಕಿಡಿಕಾರಿದ್ದಾರೆ. ಗಣೇಶ ಮೂರ್ತಿ ವಿಸರ್ಜನೆ ವೇಳೆ ಆದ ಗಲಭೆ, ಘರ್ಷಣೆಗಳ ಕುರಿತು ಬೇಸರ ವ್ಯಕ್ತಪಡಿಸಿದ ಮೋದಿ, ಕರ್ನಾಟಕದಲ್ಲಿ ಕಾಂಗ್ರೆಸ್ ಒಂದು ವರ್ಗದ ತುಷ್ಟೀಕರಣ ಮಾಡುತ್ತಿದೆ.
ಕಾಂಗ್ರೆಸ್ ತುಷ್ಟೀಕರಣಕ್ಕಾಗಿ ಕೆಳಮಟ್ಟಕ್ಕೆ ಇಳಿಯಬಹುದು. ಇಂದು ಕರ್ನಾಟಕದಲ್ಲಿ ದೇವರು ಗಣಪತಿಯನ್ನೂ ಕಾಂಗ್ರೆಸ್ ಸರ್ಕಾರ ಕಂಬಿ ಹಿಂದೆ ಹಾಕಿದೆ ಎಂದು ಟೀಕಿಸಿದ್ದಾರೆ. ಇಡೀ ದೇಶವೇ ಗಣಪತಿ ಉತ್ಸವ ಆಚರಿಸುತ್ತಿದ್ದಾರೆ. ಕರ್ನಾಟಕದಲ್ಲಿ ವಿಘ್ನನಿವಾರಕರ ಪೂಜೆಗೂ ಕಾಂಗ್ರೆಸ್ ವಿಘ್ನ ಮಾಡುತ್ತಿದೆ ಎಂದು ಮೋದಿ ಬೇಸರ ಹೊರಹಾಕಿದ್ದಾರೆ.
Onam 2024: ಓಣಂ ಹಬ್ಬಆಚರಿಸುವ ವಿಧಾನ, ಹಿಂದಿನ ಮಹತ್ವ ಮತ್ತು ವಿಶೇಷತೆ ಏನು ಗೊತ್ತಾ..?
ಹರಿಯಾಣ ವಿಧಾನಸಭೆ ಚುನಾವಣೆ ಹಿನ್ನೆಲೆ ಕುರುಕ್ಷೇತ್ರದಲ್ಲಿ ಚುನಾವಣೆ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ತಮ್ಮ ರಾಜ್ಯಗಳಲ್ಲಿ ಕಾಂಗ್ರೆಸ್ಗೆ ಅವಕಾಶ ನೀಡಿದ ಜನರು ಈಗ ಪಶ್ಚಾತ್ತಾಪ ಪಡುತ್ತಿದ್ದಾರೆ. ಕಾಂಗ್ರೆಸ್ನ ಸುಳ್ಳುಗಳು ಕರ್ನಾಟಕ ಮತ್ತು ತೆಲಂಗಾಣವನ್ನೂ ಬಿಟ್ಟಿಲ್ಲ.
ಕರ್ನಾಟಕದಲ್ಲಿ ಸಾಕಷ್ಟು ಅವ್ಯವಸ್ಥೆ ಇದೆ. ಹಣದುಬ್ಬರ ಮತ್ತು ಭ್ರಷ್ಟಾಚಾರವು ಉತ್ತುಂಗದಲ್ಲಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಲ್ಲಿಯ ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿವೆ. ಬಂಡವಾಳ ಮತ್ತು ಉದ್ಯೋಗಗಳು ಕಡಿಮೆಯಾಗಿವೆ ಎಂದು ಕಾಂಗ್ರೆಸ್ ತೋರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.