ಬೆಂಗಳೂರು: ಬಿಜೆಪಿ ಸತ್ಯಶೋಧನಾ ಸಮಿತಿಯು ನಾಳೆ (ಸೋಮವಾರ) ನಾಗಮಂಗಲಕ್ಕೆ ಭೇಟಿ ಕೊಟ್ಟು ಅಲ್ಲಿನ ಮಾಹಿತಿಯನ್ನು ಪಡೆಯಲಿದೆ ಎಂದು ಮಾಜಿ ಡಿಸಿಎಂ ಡಾ.ಸಿ.ಎನ್ ಅಶ್ವಥ್ ನಾರಾಯಣ್ ತಿಳಿಸಿದರು.
ಈ ಕುರಿತು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನನ್ನ ನೇತೃತ್ವದಲ್ಲಿ ಬಿಜೆಪಿ ಸತ್ಯಶೋಧನಾ ಸಮಿತಿಯನ್ನು ರಚಿಸಿದ್ದು, ಮಾಜಿ ಸಚಿವರು ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ಭೈರತಿ ಬಸವರಾಜ್, ಮಾಜಿ ಸಚಿವ ಕೆ.ಸಿ. ನಾರಾಯಣಗೌಡ, ಬಿಜೆಪಿ ರಾಜ್ಯ ಕಾರ್ಯದರ್ಶಿ ಶ್ರೀಮತಿ ಲಕ್ಷ್ಮೀ ಅಶ್ವಿನ್ ಗೌಡ, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರನ್ನು ಸಮಿತಿ ಒಳಗೊಂಡಿದೆ ಎಂದರು.
Onam 2024: ಓಣಂ ಹಬ್ಬಆಚರಿಸುವ ವಿಧಾನ, ಹಿಂದಿನ ಮಹತ್ವ ಮತ್ತು ವಿಶೇಷತೆ ಏನು ಗೊತ್ತಾ..?
ನಾಗಮಂಗಲದಲ್ಲಿ ಗಣೇಶೋತ್ಸವ ಸಂದರ್ಭದಲ್ಲಿ ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ. ಪ್ರಾರಂಭದಲ್ಲಿ ಅದೇನೂ ಇಲ್ಲ ಎಂಬಂತೆ ಹೇಳಿಕೆ ಕೊಟ್ಟರು. ನಂತರ ಇಂಟೆಲಿಜೆನ್ಸ್ ಮುಖ್ಯಸ್ಥರನ್ನು ವರ್ಗಾಯಿಸಿದರು. ಇನ್ಸ್ಪೆಕ್ಟರ್ ಅನ್ನು ಅಮಾನತು ಮಾಡಿದ್ದು, ಕಾನೂನು- ಸುವ್ಯವಸ್ಥೆ ನಿರ್ವಹಿಸುವಲ್ಲಿನ ವೈಫಲ್ಯವು ನಾಗಮಂಗಲ ಘಟನೆ ಮೂಲಕ ವ್ಯಕ್ತವಾಗಿದೆ ಎಂದು ಕಿಡಿಕಾರಿದರು.