ಹುಬ್ಬಳ್ಳಿ: ಸರ್.ಎಂ.ವಿಶ್ವೇಶ್ವರಯ್ಯ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಸಿವಿಲ್ ಎಂಜಿನಿಯರ್ಗಳು ನಡೆಯಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಕೋಮು ಸೂಕ್ಷ್ಮ ಪ್ರದೇಶ ಸುರತ್ಕಲ್ ಬಳಿಯ ಕಾಟಿಪಳ್ಳದಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ!
ಹುಬ್ಬಳ್ಳಿ–ಧಾರವಾಡ ಕನ್ಸಲ್ಟಿಂಗ್ ಸಿವಿಲ್ ಎಂಜಿನಿಯರ್ಸ್ ಅಸೋಸಿಯೇಷನ್ ವತಿಯಿಂದ ಹುಬ್ಬಳ್ಳಿಯ ಬಿವಿಬಿ ಎಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಸರ್.ಎಂ.ವಿಶ್ವೇಶ್ವರಯ್ಯ ಅವರ ಜನ್ಮದಿನದ ಪ್ರಯುಕ್ತ ಭಾನುವಾರ ಏರ್ಪಡಿಸಿದ್ದ ಎಂಜಿನಿಯರ್ಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬೇರೆ ದೇಶಗಳು, ನೆರೆಯ ರಾಜ್ಯಗಳಲ್ಲಿ ಮೂರ್ನಾಲ್ಕು ದಶಕಗಳ ಹಿಂದೆಯೇ ವೃತ್ತಿಪರ ಸಿವಿಲ್ ಎಂಜಿನಿಯರ್ಸ್ ಕಾಯ್ದೆ ಜಾರಿಗೆ ಬಂದಿದೆ. ಅದೇ ರೀತಿ ರಾಜ್ಯದಲ್ಲಿಯೂ ಈ ಕಾಯ್ದೆ ಜಾರಿಗೆ ಒತ್ತಾಯಿಸಲಾಗಿತ್ತು. ಶೀಘ್ರದಲ್ಲೇ ಈ ಕಾಯ್ದೆ ಜಾರಿಗೆ ಬರಲಿದೆ ಎಂದರು.
ಕೈಗಾರಿಕೆ, ವಸತಿ, ಹೆದ್ದಾರಿ, ರೈಲ್ವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಎಂಜಿನಿಯರ್ಗಳ ಕೊಡುಗೆ ಅಪಾರ. ವೃತ್ತಿಪರ ಸಿವಿಲ್ ಎಂಜಿನಿಯರ್ಸ್ ಕಾಯ್ದೆ ಜಾರಿಗೆ ಬಂದ ನಂತರ ಹಲವು ಬದಲಾವಣೆಗಳಾಗುವ ಸಾಧ್ಯತೆ ಇದೆ. ಎಂಜಿನಿಯರ್ಗಳಿಗೆ ಭದ್ರತೆ ಸಿಗಲಿದೆ ಎಂದು ಹೇಳಿದರು.
ಸರ್ಕಾರಿ ಎಂಜಿನಿಯರ್ಗಳಿಗೆ ತರಬೇತಿಯ ಕೊರತೆ ಇದೆ. ಈ ಕಾರಣಕ್ಕೆ ಶೇ 1 ರಷ್ಟು ಹಣವನ್ನು ತರಬೇತಿಗೆ ಮೀಸಲಿಡಲಾಗಿದೆ. ಲೋಕೋಪಯೋಗಿ ಇಲಾಖೆಯಲ್ಲಿ ಅನೇಕ ಸುಧಾರಣೆ ತರಲು ಯತ್ನಿಸಲಾಗಿತ್ತಿದೆ ಎಂದರು.
ಕಾನೂನು ಮತ್ತು ಸಂಸದಿಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ ಮಾತನಾಡಿ, ಸದೃಢ ದೇಶ ನಿರ್ಮಾಣದಲ್ಲಿ ಸಿವಿಲ್ ಎಂಜಿನಿಯರ್ಗಳ ಪಾತ್ರ ಪ್ರಮುಖವಾಗಿದೆ. ಸರ್.ಎಂ.ವಿಶ್ವೇಶ್ವರಯ್ಯ ಅವರ ಬುದುಕು ಮತ್ತು ಅವರ ಕಾರ್ಯಗಳು ಎಂಜಿನಿಯರ್ಳಿಗೆ ಪ್ರೇರಣೆಯಾಗ ಬೇಕು ಹೇಳಿದರು.
ಬಸವಣ್ಣನವರು ಕಾಯಕವೇ ಕೈಲಾಸ ಎಂದು ಹೇಳಿದರು. ಅದನ್ನು ನಿಜವಾಗಿಯೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ನಡೆದವರು ಸರ್.ಎಂ.ವಿಶ್ವೇಶ್ವರಯ್ಯನವರು ಎಂದು ಬಣ್ಣಿಸಿದರು.