ಫ್ಲೋರಿಡಾ:- ಅಮೆರಿಕಾದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ರನ್ನು ಗುರಿಯಾಗಿಸಿಕೊಂಡು ಮತ್ತೆ ಗುಂಡಿನ ದಾಳಿ ನಡೆದಿದೆ. ಸ್ವಲ್ಪದರಲ್ಲೇ ಯುಎಸ್ ಮಾಜಿ ಅಧ್ಯಕ್ಷ ಪಾರಾಗಿದ್ದಾರೆ.
Kolara: ಜಾತಿ ನಿಂದನೆ ಮಾಡುವ ಹಕ್ಕು ಯಾರಿಗೂ ಇಲ್ಲ – ಶಾಸಕ ಕೊತ್ತೂರು ಮಂಜುನಾಥ್!
ಫ್ಲೋರಿಡಾದ ಗಾಲ್ಫ್ ಕ್ಲಬ್ ನಲ್ಲಿದ್ದ ಟ್ರಂಪ್ ಮೇಲೆ ಅಜ್ಞಾತ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಆದರೆ, ಟ್ರಂಪ್ ಅವರಿಗೆ ಯಾವುದೇ ಗುಂಡು ತಾಕಿಲ್ಲ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದೇ ವರ್ಷ ಜುಲೈ 13ರಂದು ಅವರ ಮೇಲೆ ಅಮೆರಿಕದ ಪೆನ್ಸಿಲ್ವೇನಿಯಾದಲ್ಲಿರುವ ಬಟ್ಲರ್ ಎಂಬಲ್ಲಿ ಅವರ ಮೇಲೆ ಗುಂಡಿನ ದಾಳಿಯಾಗಿತ್ತು. ಅಂದು ಚುನಾವಣಾ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಟ್ರಂಪ್ ಅವರ ಮೇಲೆ ಸುಮಾರು 442 ಅಡಿಗಷ್ಟು ದೂರದಿಂದ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದ.
ಅಂದು ಹಾರಿದ ಗುಂಡು ಅವರ ಬಲಕಿವಿಯ ತುದಿಯನ್ನು ಸವರಿಕೊಂಡು ಹೋಗಿತ್ತು. ಅದರಿಂದಾಗಿ ಟ್ರಂಪ್ ಕೂದಲೆಳೆಯ ಅಂತರದಲ್ಲಿ ಸಾವಿನಿಂದ ಪಾರಾಗಿದ್ದರು.
ಫ್ಲೋರಿಡಾದ ಸ್ಥಳೀಯ ಕಾಲಮಾನ ಸೆ. 15ರಂದು ಸಂಜೆಯಲ್ಲಿ ಫ್ಲೋರಿಡಾದಲ್ಲಿರುವ ವೆಸ್ಟ್ ಪಾಮ್ ಬೀಚ್ ನಲ್ಲಿರುವ ತಮ್ಮದೇ ಗಾಲ್ಫ್ ಕ್ಲಬ್ ಆದ ಟ್ರಂಪ್ ಇಂಟರ್ ನ್ಯಾಷನಲ್ ಗಾಲ್ಫ್ ಕ್ಲಬ್ ಗೆ ಟ್ರಂಪ್ ಅವರು ಆಗಮಿಸಿದ್ದರು.
ವಾರಾಂತ್ಯದಲ್ಲಿ ಗಾಲ್ಫ್ ಆಡುವುದು ಅವರ ಅಚ್ಚುಮೆಚ್ಚಿನ ಹವ್ಯಾಸವಾಗಿದ್ದರಿಂದ ಅವರು ಎಲ್ಲಿರುತ್ತಾರೋ ಅವರಿರುವ ಹತ್ತಿರದ ಯಾವುದೇ ಗಾಲ್ಫ್ ಕ್ಲಬ್ ಗೆ ಅವರು ಹೋಗುತ್ತಾರೆ. ಸೆ. 15ರಂದು ಅವರು ಫ್ಲೋರಿಡಾದಲ್ಲೇ ಇದ್ದಿದ್ದರಿಂದ ತಮ್ಮ ಸ್ವಂತ ಗಾಲ್ಫ್ ಕ್ಲಬ್ ಗೆ ಅವರು ಹೋಗಿದ್ದರು. ಗಾಲ್ಫ್ ಆಟ ಮುಗಿಸಿ ಇನ್ನೇನು ಮನೆಗೆ ಹೊರಡಬೇಕು ಎನ್ನುವಷ್ಟರಲ್ಲಿ ಅವರ ಮೇಲೆ ಗುಂಡಿನ ದಾಳಿ ನಡೆದಿದೆ.