ಅಗರ್ತಲಾ: ಶಾಲೆ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ 5ನೇ ತರಗತಿ ಬಾಲಕಿ ಮೇಲೆ ಕಾಮುಕರ ಗ್ಯಾಂಗ್ವೊಂದು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ತ್ರಿಪುರಾದ ದಕ್ಷಿಣಭಾಗದ (Tripura South District) ಜಿಲ್ಲೆಯೊಂದರಲ್ಲಿ ನಡೆದಿದೆ.
ಇತ್ತೀಚಿಗಷ್ಟೇ ತ್ರಿಪುರಾದ ಉತ್ತರ ಭಾಗದ ಜಿಲ್ಲೆಯೊಂದರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಗ್ಯಾಂಗ್ರೇಪ್ (Gang Rape) ನಡೆದ ಪ್ರಕರಣ ಬೆಳಿಕಿಗೆ ಬಂದಿತ್ತು. ಇದಾದ ಮಾರನೇ ದಿನವೇ ಘಟನೆ ನಡೆದಿದೆ.
ಶಾಲೆಯಿಂದ ಮಗಳು ಹಿಂದಿರುಗದೇ ಇದ್ದಾಗ ಸಂತ್ರಸ್ತ ಬಾಲಕಿಯ ಪೋಷಕರು ಸುತ್ತಮುತ್ತಲಿನ ಪ್ರದೇಶದಲ್ಲಿ ಹುಡುಕಿದ್ದಾರೆ. ಎಷ್ಟೇ ಹುಡುಕಿದರೂ ಸಿಗದೇ ಇದ್ದಾಗ ತ್ರಿಪುರಾದ ಬೆಲೊನಿಯಾ ಮಹಿಳಾ ಪೊಲೀಸ್ (Belonia Women Police Station) ಠಾಣೆಯಲ್ಲಿ ದೂರು ನೀಡಿದ್ದಾರೆ.