ಬೆಳಗಾವಿ: ವಿಜಯೇಂದ್ರ ನಮ್ಮ ಪಕ್ಷದ ನಾಯಕನಲ್ಲ ಎಂದು ತಮ್ಮದೇ ಪಕ್ಷದ ರಾಜ್ಯಾಧ್ಯಕ್ಷರ ವಿರುದ್ಧ ಏಕವಚನದಲ್ಲೇ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆಕ್ರೋಶ ಹೊರಹಾಕಿದ್ದಾರೆ.
‘ಅವಳು ತುಂಬಾ ಕಪ್ಪು’: ಗಂಡನಿಂದ ನಿಂದನೆಗೊಳಗಾದ ನವ ವಿವಾಹಿತೆ ಸೂಸೈಡ್!
ಸಭೆಯಲ್ಲಿ ಏನು ಚರ್ಚೆಯಾಯಿತು ಎಂದು ಹೇಳುವುದಕ್ಕೆ ಆಗುವುದಿಲ್ಲ. ತಪ್ಪು ಮಾಡಿದವರನ್ನು ಸಭೆಯಲ್ಲಿ ಮುಖಂಡರು ಬೈದಿದ್ದಾರೆ ಅಷ್ಟೇ. 15ರಿಂದ 20 ಜನರ ಸಾಮೂಹಿಕ ನಾಯಕತ್ವದಲ್ಲಿ ಮುನ್ನಡೆಸಲಿ ಎಂದು ಬಿಜೆಪಿ, ಆರ್ಎಸ್ಎಸ್ ಪ್ರಮುಖರ ಸಭೆಯಲ್ಲಿ ಮನವಿ ಮಾಡಿದ್ದೇವೆ. ವರಿಷ್ಠರು ನೀವು ಇಂತಿಂಥ ಕೆಲಸ ಮಾಡುವಂತೆ ಟಾಸ್ಕ್ ನೀಡಿದ್ದಾರೆ. 120ರಿಂದ 130 ಕ್ಷೇತ್ರಗಳನ್ನು ಗೆಲ್ಲಿಸಿಕೊಡುವ ಶಕ್ತಿ ನಮ್ಮಲ್ಲಿದೆ. ವರಿಷ್ಠರು ನೀಡಿದ ಟಾಸ್ಕ್ನಲ್ಲಿ ನಾನು ವಿಫಲನಾದರೆ ನನ್ನನ್ನು ಒದ್ದು ಹೊರಹಾಕಿ ಎಂದು ಸಂಘ ಪರಿವಾರದ ಪ್ರಮುಖರ ಸಭೆಯಲ್ಲಿ ಹೇಳಿದ್ದೇನೆ ಎಂದು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಅನಂತ್ ಕುಮಾರ್ ತೀರಿಕೊಂಡ ಮೇಲೆ ಬಿಜೆಪಿಯಲ್ಲಿ ಯಾರೂ ಪ್ರಬಲ ನಾಯಕನಾಗಿಲ್ಲ. ಬಿಜೆಪಿ ಎಂಬುದು ಒಬ್ಬರ ಕೈಯಲ್ಲಿ ಆಡಳಿತ ಕೊಡುವುದು ಬೇಡ. ಸಾಮೂಹಿಕ ನಾಯಕತ್ವಕ್ಕೆ ಒತ್ತು ಕೊಡುವಂತೆ ನಾವು ಮೊನ್ನೆ ಸಭೆಯಲ್ಲಿ ಹೇಳಿದ್ದೇವೆ. ಒಬ್ಬರ ಕೈಗೆ ಪಕ್ಷ ಸಿಕ್ಕರೆ ನಾನು ಕೂಡ ಎರಡನೇ ಯಡಿಯೂರಪ್ಪನಾಗುತ್ತೇನೆ. ಆ ಚೇರ್ ಮೇಲೆ ಕೂತರೆ ಸರ್ವಾಧಿಕಾರ ಧೋರಣೆ ಬರುತ್ತದೆ. 15 ರಿಂದ 20 ಜನರ ಸಾಮೂಹಿಕ ನಾಯಕತ್ವದ ಕೈಯಲ್ಲಿ ಲೀಡರ್ ಶಿಪ್ ಕೊಡುವಂತೆ ಮನವಿ ಮಾಡಿದ್ದೇವೆ ಎಂದು ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.