ಕಲಬುರಗಿ:- ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಯಲಿದೆ ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ.
ವಿಜಯೇಂದ್ರ ನಮ್ಮ ಪಕ್ಷದ ನಾಯಕನಲ್ಲ, ಅವನು ಬಿಜೆಪಿಯ ಭ್ರಷ್ಟ: ರಮೇಶ್ ಜಾರಕಿಹೊಳಿ ಕಿಡಿ!
ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಭಾಗದ ಅಭಿವೃದ್ಧಿಗಾಗಿ ಪೂರಕ ಚರ್ಚೆ ಹಾಗೂ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗಾಗಿ ಆಯವ್ಯಯದಲ್ಲಿ ರೂಪಿಸಲಾಗಿರುವ ಯೋಜನೆಗಳು ಹಾಗೂ ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿನ ಜನರಿಗೆ ಉದ್ಯೋಗಾವಕಾಶಗಳ ಬಗ್ಗೆ ಹಾಗೂ ಪ್ರತ್ಯೇಕ ಸಚಿವಾಲಯ ರಚನೆ ಬಗ್ಗೆಯೂ ಚರ್ಚಿಸಲಾಗುವುದು. ಕಾಂಗ್ರೆಸ್ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಪರವಾಗಿದೆ ಎಂದು ಹೇಳಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದ ಜನರ ನಿರೀಕ್ಷೆ ಬಗ್ಗೆ ಪ್ರತಿಕ್ರಿಯಿಸಿದ್ದು, ಬಡವರ ಪರವಾದ ಸರ್ಕಾರ ನಮ್ಮದು. ಆದ್ದರಿಂದ ಈ ಭಾಗದ ಅಭಿವೃದ್ಧಿಗಾಗಿ 5000 ಕೋಟಿ ರೂ.ಗಳನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.