ಮಂಗಳೂರು:– ಬಿ.ಸಿ.ರೋಡ್ನಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ಎದುರಾಗಿದ್ದು, ಮದ್ಯದಂಗಡಿ ಬಂದ್ ಮಾಡುವುದಕ್ಕೆ ದ.ಕ.ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ನೀಡಿದ್ದಾರೆ.
ಯಾರ ಸರ್ಟಿಫಿಕೇಟ್ ನನಗೆ ಬೇಕಿಲ್ಲ, ಜನ ಒಪ್ಪಿದ್ದಾರೆ ಅಷ್ಟೇ ಸಾಕು: ರಮೇಶ್ ಜಾರಕಿಹೊಳಿಗೆ ವಿಜಯೇಂದ್ರ ಟಾಂಗ್!
ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಹಾಗೂ ಬಂಟ್ವಾಳ ಟಿಎಂಸಿ ಮಾಜಿ ಅಧ್ಯಕ್ಷ ಮೊಹಮ್ಮದ್ ಶರೀಫ್ ಪ್ರಚೋದನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಮಂಗಳೂರು ಹೊರವಲಯದ ಬಿಸಿ ರೋಡ್ನಲ್ಲಿ ಇಂದು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಗಣೇಶ ಚತುರ್ಥಿ ಮೆರವಣಿಗೆಯ ದಿನದಂದು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಕೋಮು ಘರ್ಷಣೆಯನ್ನು ಖಂಡಿಸಿ ತಾವು ಪ್ರತಿಭಟನೆ ನಡೆಸುತ್ತಿದ್ದು, ಈದ್ ಮಿಲಾದ್ ರ್ಯಾಲಿಗೆ ಕಡಿವಾಣ ಹಾಕುವಂತೆ ಒತ್ತಾಯಿಸಿದ್ದ ಶರಣ್ ಪಂಪ್ವೆಲ್, ಈದ್ ಮೆರವಣಿಗೆಯನ್ನು ಬೇಕಾದರೆ ನಿಲ್ಲಿಸಬಹುದು ಎಂದು ಹೇಳಿದ್ದರು.
ಶರಣ್ ಪಂಪ್ವೆಲ್ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಶರೀಫ್ ತಾಕತ್ತಿದ್ದರೆ ಈದ್ ರ್ಯಾಲಿಯನ್ನು ತಡೆಯಿರಿ ಎಂದು ಸವಾಲು ಹಾಕಿದ್ದರು. ಈ ಸವಾಲನ್ನು ಸ್ವೀಕರಿಸಿದ ಶರಣ್ ಪಂಪ್ವೆಲ್, ಪುನೀತ್ ಅತ್ತಾವರ್ ಸೇರಿದಂತೆ ಹಲವು ಹಿಂದುತ್ವ ಕಾರ್ಯಕರ್ತರು ಬಿಸಿ ರೋಡ್ ಚಲೋ ನಡೆಸಿದರು. ಇದರಿಂದಾಗಿ ಪೊಲೀಸರು ಪರ್ಯಾಯ ಮಾರ್ಗದ ವ್ಯವಸ್ಥೆ ಮಾಡಿ, ಬಿಸಿ ರೋಡ್ ಮೂಲಕ ಈದ್ ಮಿಲಾದ್ ಮೆರವಣಿಗೆಗೆ ಹೋಗಲು ಅನುಮತಿ ನಿರಾಕರಿಸಿದರು. ಈ ಮಧ್ಯೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು, ಬಂಟ್ವಾಳ ಟಿಎಂಸಿ ಮಿತಿಯಲ್ಲಿ ಮುಂದಿನ 48 ಗಂಟೆಗಳ ಕಾಲ ಮದ್ಯ ಮಾರಟಕ್ಕೆ ನಿಷೇಧ ಹೇರಿದ್ದಾರೆ.