ಬೆಂಗಳೂರು:- ಕೊಂಕಣ ರೈಲ್ವೆ ಮುಂದಿನ ದಿನಗಳಲ್ಲಿ ಭಾರತೀಯ ರೈಲ್ವೆ ಜೊತೆ ವಿಲೀನವಾಗಲಿದೆ ಎಂದು ಸಚಿವ ವಿ ಸೋಮಣ್ಣ ಹೇಳಿದ್ದಾರೆ.
ಲೈಂಗಿಕ ದೌರ್ಜನ್ಯ ಆರೋಪ: ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ವಿರುದ್ಧ FIR
ಕೊಂಕಣ ರೈಲ್ವೆ ಜಾಲವು ಕೇರಳದಿಂದ ಮಹಾರಾಷ್ಟ್ರದವರೆಗೆ ವ್ಯಾಪಿಸಿದೆ. ಕರ್ನಾಟಕ ರಾಜ್ಯವೊಂದರಲ್ಲೇ ಒಟ್ಟು 742 ಕಿ.ಮೀ. ಕ್ರಮಿಸುತ್ತದೆ ಎಂದು ಸೋಮಣ್ಣ ತಿಳಿಸಿದರು.
ಪ್ರಯಾಣಿಕರಿಗೆ ಇನ್ನಷ್ಟು ಉತ್ತಮ ಸೇವೆಗಳನ್ನು ಒದಗಿಸುವ ಅಗತ್ಯವಿದೆ. ಹೀಗಾಗಿ ಭಾರತೀಯ ರೈಲ್ವೇಯೊಂದಿಗೆ ವಿಲೀನಗೊಳಿಸುವ ಬಗ್ಗೆ ಪರಿಗಣಿಸಲಾಗುತ್ತಿದೆ ಎಂದು ಅವರು ತಿಳಿಸಿದರು
ವಿಲೀನ ವಿಚಾರವಾಗಿ ನಾವು ಕರ್ನಾಟಕ, ಕೇರಳ ಮತ್ತು ಗೋವಾ ಸರ್ಕಾರಗಳೊಂದಿಗೆ ಮಾತುಕತೆ ನಡೆಸಿದ್ದೇವೆ. ಮಹಾರಾಷ್ಟ್ರಕ್ಕೆ ಮನವರಿಕೆ ಮಾಡಿಕೊಟ್ಟ ನಂತರ, ವಿಲೀನ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
ಈ ಹಿಂದೆ ರೈಲ್ವೆ ಇಲಾಖೆಯು ರಾಜ್ಯ ಸರ್ಕಾರದ ಶೇ 50ರಷ್ಟು ಕೊಡುಗೆಯೊಂದಿಗೆ ರಾಜ್ಯದಲ್ಲಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿತ್ತು. ಆದರೆ ಈಗ ರಾಜ್ಯ ಸರ್ಕಾರದಿಂದ ಯಾವುದೇ ಸಹಕಾರ ದೊರೆಯುವುದಿಲ್ಲ. ಈ ಕಾರಣಕ್ಕೆ ಎಲ್ಲಾ ವೆಚ್ಚವನ್ನು ಕೇಂದ್ರವೇ ಭರಿಸಲು ನಿರ್ಧರಿಸಿದೆ ಎಂದು ಸೋಮಣ್ಣ ತಿಳಿಸಿದರು.
ರಾಜ್ಯದ ಹಲವು ಬಾಕಿ ಇರುವ ಯೋಜನೆಗಳನ್ನು ಶೀಘ್ರ ಪೂರ್ಣಗೊಳಿಸಲಾಗುವುದು. ಮೂರು ವರ್ಷಗಳಲ್ಲಿ ಬೆಳಗಾವಿ-ಧಾರವಾಡ ನಡುವಿನ ನೇರ ರೈಲು ಮಾರ್ಗದ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ. ಮೂರು ತಿಂಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ರೈಲ್ವೆ ಇಲಾಖೆಗೆ ಹಸ್ತಾಂತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ