ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ಪುತ್ರ ಹಾಗೂ ಗೋವಾ ತಂಡದ ಆಲ್ರೌಂಡರ್ ಅರ್ಜುನ್ ತೆಂಡೂಲ್ಕರ್ ಅವರು ತಮ್ಮ ಅಸಾಧಾರಣ ಬೌಲಿಂಗ್ ಪ್ರದರ್ಶನದ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಪ್ರಸ್ತುತ ಕೆಎಸ್ಸಿಎ ಆತಿಥ್ಯದಲ್ಲಿ ನಡೆಯುತ್ತಿರುವ 2024ರ ಕೆ ತಿಮ್ಮಯ್ಯ ಮೆಮೋರಿಯಲ್ ಕ್ರಿಕೆಟ್ ಟೂರ್ನಿಯಲ್ಲಿ ಕರ್ನಾಟಕ ವಿರುದ್ದದ ಪಂದ್ಯದಲ್ಲಿ ಅರ್ಜುನ್ ತೆಂಡೂಲ್ಕರ್ ಅವರು 9 ವಿಕೆಟ್ಗಳ ಸಾಧನೆ ಮಾಡಿದ್ದಾರೆ.
ನಿಕಿನ್ ಜೋಸ್ ಹಾಗೂ ವಿಕೆಟ್ ಕೀಪರ್ ಶರತ್ ಶ್ರೀನಿವಾಸ್ ಮತ್ತು ಅಂಡರ್-19 ಹಾಗೂ ಅಂಡರ್ 23 ಆಟಗಾರರು ಒಳಗೊಂಡ ಕೆಎಸ್ಸಿಎ ತಂಡ ಹಾಗೂ ಗೋವಾ ತಂಡ ಸೋಮವಾರ ನಡೆದಿದ್ದ ಪಂದ್ಯದಲ್ಲಿ ಕದಾಟ ನಡೆಸಿದ್ದವು. ಆದರೆ, ಈ ಪಂದ್ಯದಲ್ಲಿ ಅರ್ಜುನ್ ತೆಂಡೂಲ್ಕರ್ ಅವರ ಮಾರಕ ಬೌಲಿಂಗ್ ದಾಳಿಗೆ ನಲುಗಿದ ಕರ್ನಾಟಕ ತಂಡ ಬ್ಯಾಟಿಂಗ್ ವೈಫಲ್ಯ ಅನುಭವಿಸಿತು. ಆ ಮೂಲಕ 189 ರನ್ಗಳ ಭಾರಿ ಅಂತರದಲ್ಲಿ ಸೋಲು ಅನುಭವಿಸಿತು. ಎರಡೂ ಇನಿಂಗ್ಸ್ಗಳಲ್ಲಿ ಅರ್ಜುನ್ ತೆಂಡೂಲ್ಕರ್ 87 ರನ್ ನೀಡಿ 9 ವಿಕೆಟ್ಗಳನ್ನು ಪಡೆದರು.
ನಂತರ ಭಾರೀ ಹಿನ್ನಡೆಯಿಂದ ದ್ವಿತೀಯ ಇನಿಂಗ್ಸ್ ಆರಂಭಿಸಿದ ಕೆಎಸ್ಸಿಎ XI ತಂಡ ಮತ್ತೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿತು. ಆ ಮೂಲಕ 30.4 ಓವರ್ಗಳಿಗೆ 121 ರನ್ಗಳಿಗೆ ಆಲ್ಔಟ್ ಆಯಿತು. ದ್ವಿತೀಯ ಇನಿಂಗ್ಸ್ನಲ್ಲಿಯೂ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ತೋರಿದ ಅರ್ಜುನ್ ತೆಂಡೂಲ್ಕರ್ ಅವರು 46 ರನ್ ನೀಡಿ 4 ವಿಕೆಟ್ಗಳನ್ನು ಕಬಳಿಸಿದ್ದಾರೆ. ಆ ಮೂಲಕ ಗೋವಾ ತಂಡ ಇನಿಂಗ್ಸ್ ಹಾಗೂ 189 ರನ್ಗಳ ಗೆಲುವು ಪಡೆಯಿತು.