ಕಲಬುರಗಿ: ಕಾಂಗ್ರೆಸ್ ಪಕ್ಷಕ್ಕೆ ಷಡ್ಯಂತ್ರ ಮಾಡುವ ಅವಶ್ಯಕತೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಬಿಜೆಪಿ ಶಾಸಕ ಮುನಿರತ್ನ ಬಂಧನ ಕಾಂಗ್ರೆಸ್ ಷಡ್ಯಂತ್ರ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದರು.
ಕಾಂಗ್ರೆಸ್ ಪಕ್ಷಕ್ಕೆ ಷಡ್ಯಂತ್ರ ಮಾಡುವ ಅವಶ್ಯಕತೆ ಇಲ್ಲ. ಬಿಜೆಪಿ ರೀತಿ ಕಾಂಗ್ರೆಸ್ ಷಡ್ಯಂತ್ರ ಮಾಡಿದರೆ, ಕರ್ನಾಟಕದ ಜೈಲುಗಳು ಸಾಕಾಗುವುದಿಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದರು. ಷಡ್ಯಂತ್ರ, ಸೇಡಿನ ರಾಜಕಾರಣ ಮಾಡುವುದು, ಬಿಜೆಪಿಯವರ ಚಾಳಿ. ಮಾಜಿ ಮಂತ್ರಿಯಾದವರು ಮಹಿಳೆ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ.
Narendra Modi: ಭಾರತದಲ್ಲಿ 2030 ರ ವೇಳೆ 500 GW ಗ್ರೀನ್ ಎನರ್ಜಿ ಉತ್ಪಾದನೆ ಗುರಿ: ಪ್ರಧಾನಿ ಮೋದಿ
ರಾಜಕಾರಣಿಗಳು ಅಂದ ಮೇಲೆ ನಮ್ಮನ್ನು ಸಾವಿರ ಜನ ಅನುಕರಣೆ ಮಾಡುತ್ತಾರೆ. ನಮ್ಮ ಜವಾಬ್ದಾರಿ ಏನು ಅಂತ ತಿಳಿದುಕೊಂಡು ಮಾತಾಡಬೇಕು. ಹೆಣ್ಣು ಮಕ್ಕಳ ಬಗ್ಗೆ ಮಾತಾಡುವಾಗ ನಾಲಿಗೆ ಬಿಗಿ ಹಿಡಿದು ಮಾತಾಡಬೇಕು ಎಂದು ಸಚಿವರು ಹೇಳಿದರು.