ಬೆಂಗಳೂರಿನ ಅಶೋಕ್ ನಗರದಲ್ಲಿರುವ ಸೈನಿಕ ಶಾಲೆಗೆ ಇಂದು ಬಾಂಬ್ ಬೆದರಿಕೆ ಕರೆ ಬಂದಿದ್ದು, ಶಾಲೆಗೆ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಇ-ಮೇಲ್ ಮೂಲಕ ಸಂದೇಶ ರವಾನಿಸಲಾಗಿದೆ.
ಈ ಬಗ್ಗೆ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಆದ್ರೆ, ಯಾವುದೇ ಬಾಂಬ್ ಪತ್ತೆಯಾಗಿಲ್ಲ. ಇದೊಂದು ಹುಸಿ ಬಾಂಬ್ ಕರೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಂಬ್ ಇಟ್ಟು ಬ್ಲಾಸ್ಟ್ ಮಾಡುವುದಾಗಿ ಇಮೇಲ್ನಲ್ಲಿ ಬರೆಯಲಾಗಿದೆ. ಶಾಲೆಯ ಇ ಮೇಲ್ ಖಾತೆಗೆ ಬೆದರಿಕೆ ಮೇಲ್ ಬಂದಿದ್ದು, ಇದನ್ನು ನೋಡಿದ ಸಿಬ್ಬಂದಿ ಕೂಡಲೇ ಕ ಆಶೋಕ ನಗರ ಪೊಲೀಸ್ ಠಾಣೆ ಗೆ ಮಾಹಿತಿ ನೀಡಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಬಾಂಬ್ ನಿಷ್ಕ್ರೀಯ ದಳ, ಶ್ವಾನ ದಳ ಸಮೇತ ಶಾಲೆಗೆ ತೆರಳಿ ಪರಿಶೀಲನೆ ಮಾಡಿದ್ದಾರೆ. ಆದರೆ, ಪರಿಶೀಲನೆ ವೇಳೆ ಯಾವುದೇ ಬಾಂಬ್ ಪತ್ತೆಯಾಗಿಲ್ಲ.