ತುಮಕೂರು:- ಜಿಲ್ಲೆ ಪಾವಗಡ ತಾಲೂಕಿನ ವೈ ಎನ್ ಹೊಸಕೋಟೆಯಲ್ಲಿ ಆಂಬ್ಯುಲೆನ್ಸ್ ಇಲ್ಲದೇ ಮಕ್ಕಳು ತಮ್ಮ ತಂದೆಯ ಮೃತದೇಹವನ್ನು ಬೈಕ್ನಲ್ಲೇ ಸಾಗಿಸಿರುವ ಹೃದಯ ವಿದ್ರಾವಕ ಘಟನೆ ಜರುಗಿದೆ.
Hubballi: ಪರಿಸರ ಹಾನಿಯಾದರೆ ಮನುಕುಲದ ಅಭಿವೃದ್ಧಿ ಕುಂಠಿತ: ಪರಿಸರ ಪ್ರೇಮಿ ಚೆನ್ನು ಹೊಸಮನಿ!
ಗುಡುಗುಲ್ಲ ಹೊನ್ನೂರಪ್ಪ ಎನ್ನುವ 80 ವರ್ಷದ ವ್ಯಕ್ತಿ ಅಸ್ವಸ್ಥಗೊಂಡಿದ್ದರು. ಕೂಡಲೇ ಮಕ್ಕಳು, ಹೊನ್ನೊರಪ್ಪನವರನ್ನ 108 ಆಂಬ್ಯುಲೆನ್ಸ್ ನಲ್ಲಿ ವೈ.ಎನ್ ಹೊಸಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆ ತಂದಿದ್ದಾರೆ. ಆದರೆ ಅಷ್ಟರಾಗಲೇ ಹೊನ್ನೂರಪ್ಪನ ಜೀವ ಹೋಗಿದೆ.
ಬಳಿಕ ಮೃತ ಶರೀರವನ್ನು ಮನೆಗೆ ಸಾಗಿಸಲು 108 ಆಂಬ್ಯುಲೆನ್ಸ್ ಸಿಬ್ಬಂದಿ ನಿರಾಕಿಸಿದ್ದಾರೆ. ಮೃತದೇಹವನ್ನು ಆಂಬ್ಯುಲೆನ್ಸ್ನಲ್ಲಿ ಸಾಗಿಸುವಂತಿಲ್ಲ ಎಂದಿದ್ದಾರೆ. ಕೈಯಲ್ಲಿ ಹಣವಿಲ್ಲದೇ ಕೊನೆಗೆ ಹೊನ್ನೂರಪ್ಪ ಮಕ್ಕಳು ವಿಧಿಯಿಲ್ಲದೆ ತಂದೆ ಶವವನ್ನು ಬೈಕ್ ನಲ್ಲೇ ತೆಗೆದುಕೊಂಡು ಮನೆ ಹೋಗಿದ್ದಾರೆ ಎಂದು ತಿಳಿದು ಬಂದಿದೆ.