ಬೆಂಗಳೂರು: ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ ಹಿನ್ನೆಲೆ ಬಿಜೆಪಿ (BJP) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
https://youtu.be/-ZfPUP_NMlA?si=8lroc7eMsuogn9dp
ಯತ್ನಾಳ್, ರಾಹುಲ್ ಗಾಂಧಿ ಹಾಗೂ ಧರ್ಮಗಳ ಬಗ್ಗೆ ಅವಹೇಳನ ಮಾಡಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವ ವೇಳೆ ಅವಹೇಳನಕಾರಿ ಪದ ಬಳಸಿದ್ದಾರೆ. ಹೀಗಾಗಿ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮನೋಹರ್ ದೂರು ನೀಡಿದ್ದಾರೆ
ಈ ದೂರಿನ ಆಧಾರದ ಮೇಲೆ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.