ಬೆಂಗಳೂರಿನ ಎಮ್.ಎಸ್ ರಾಮಯ್ಯ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಅವಘಡದಲ್ಲಿ ಕೆಲ ನರ್ಸ್ಗಳಿಗೆ ಸಣ್ಣಪುಟ್ಟ ಸುಟ್ಟ ಗಾಯವಾಗಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾರೆ.
ಕಾರ್ಡಿಯಾಕ್ ಐಸಿಯು ವಾರ್ಡ್ನ ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ದುರಂತದಲ್ಲಿ ನರ್ಸ್ಗಳ ಸಮಯಪ್ರಜ್ಞೆಯಿಂದ 8 ರೋಗಿಗಳು ಪಾರಾಗಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕದ ದಳದ ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾರೆ.
ಆಸ್ಪತ್ರೆಯಲ್ಲಿ ಇದ್ದ ಅಗ್ನಿಶಾಮಕ ಪರಿಕರಗಳಿಂದ ಬೆಂಕಿ ನಂದಿಸುವ ಪ್ರಯತ್ನ ಆಗಿದೆ. ಹೀಗಾಗಿ ಆಸ್ಪತ್ರೆಯ ಅರ್ಧದಷ್ಟು ಭಾಗದಲ್ಲಿ ವಿದ್ಯುತ್ ಸಂಪರ್ಕ ನಿಲ್ಲಿಸಿ, ರೋಗಿಗಳನ್ನ ಶಿಫ್ಟ್ ಮಾಡಲಾಗಿದೆ. ಎಲ್ಲಾ ರೀತಿಯ ಸೇಫ್ಟಿ ಮೆಜರ್ ತೆಗೆದುಕೊಳ್ಳಲಾಗಿತ್ತು. ಶಾರ್ಟ್ ಸರ್ಕ್ಯೂಟ್ನಿಂದ ಘಟನೆ ನಡೆದಿದೆ