ಕಲುಬುರಗಿ: ಪ್ಯಾಲೆಸ್ತೀನ್ಗೆ ಕೇಂದ್ರ ಸರ್ಕಾರವೇ ಬೆಂಬಲ ಸೂಚಿಸಿದೆ. ಹೀಗಿರುವಾಗ ಧ್ವಜ ಹಿಡಿದುಕೊಂಡು ಹೋದರೆ ತಪ್ಪೇನು? ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರಶ್ನಿಸಿದ್ದಾರೆ. ಕಲುಬುರಗಿಯಲ್ಲಿ ಮಾತನಾಡಿದ ಅವರು, ಪ್ಯಾಲೆಸ್ತೀನ್ಗೆ ಕೇಂದ್ರ ಸರ್ಕಾರವೇ ಬೆಂಬಲ ಸೂಚಿಸಿದೆ. ಹೀಗಿರುವಾಗ ಧ್ವಜ ಹಿಡಿದುಕೊಂಡು ಹೋದರೆ ತಪ್ಪೇನು? ಕೇಂದ್ರ ಸರ್ಕಾರ ಪ್ಯಾಲೆಸ್ತೀನ್ಗೆ ಬೆಂಬಲ ಘೋಷಣೆ ಮಾಡಿರುವ ಕಾರಣವೇ ಧ್ವಜ ಹಿಡಿದಿದ್ದಾರೆ, ಇಲ್ಲಾಂದರೆ ಹಿಡಿಯುತ್ತಿರಲಿಲ್ಲ.
ಪಿಎಂ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ, ಸಬ್ಸಿಡಿ ಎಷ್ಟು..?ಯಾರು ಅರ್ಜಿ ಸಲ್ಲಿಸಬಹುದು, ಮಾಹಿತಿ ಇಲ್ಲಿದೆ
ಬೇರೆ ದೇಶದ ಬಗ್ಗೆ ಘೋಷಣೆ ಕೂಗಿದರೆ ಅದು ತಪ್ಪು. ಹಾಗೆ ಮಾಡಿದವರು ದೇಶದ್ರೋಹಿಗಳು. ಅಂಥವರನ್ನು ಗಲ್ಲಿಗೇರಿಸಬೇಕು. ಹಾಗೆಂದು ಧ್ವಜ ಹಿಡಿದರೆ ತಪ್ಪಿಲ್ಲ ಎಂದು ಜಮೀರ್ ಹೇಳಿದರು. ಬಿಜೆಪಿಯವರು ಹಿಂದೂ ಮುಸ್ಲಿಂ ಜಗಳ ತಂದಿಟ್ಟು ಮತ ಕೇಳುತ್ತಾರೆ. ಆದರೆ, ನಾವು ಹಾಗಲ್ಲ. ಮಾಡಿದ ಅಭಿವೃದ್ಧಿ ಕೆಲಸ ಮುಂದಿಟ್ಟುಕೊಂಡು ಮತ ಯಾಚಿಸುತ್ತೇವೆ ಎಂದು ಅವರು ಹೇಳಿದ್ದಾರೆ.
ಸಿಎಂ ರಾಜೀನಾಮೆ ನೀಡುತ್ತಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿರುವುದಕ್ಕೆ ಪ್ರತಿಕ್ರಿಯಿಸಿ, ವಿಜಯೇಂದ್ರರಂತಹ ನೂರು ಜನ ಬಂದರೂ ಏನೂ ಮಾಡಲು ಆಗಲ್ಲ. ಕುಮಾರಸ್ವಾಮಿ ಅವರಂಥ ಇನ್ನೂರು ಜನ ಬಂದರೂ ಏನೂ ಆಗಲ್ಲ. ಸಿದ್ದರಾಮಯ್ಯ ಹುಲಿ ಇದ್ದಂತೆ, ಅವರನ್ನು ಏನೂ ಮಾಡಲು ಆಗುವುದಿಲ್ಲ ಎಂದರು.