ಮಂಡ್ಯ : ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಸಮೀಪದ ಮಣಿಗೆರೆ ಗ್ರಾಮದ ಬಳಿ ಗುರುವಾರ ಸಂಭವಿಸಿದ ಗೂಡ್ಸ್ ಆಟೋ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಿಂದ ಗಾಯಗೊಂಡವರನ್ನು ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸಾರ್ವಜನಿಕರು ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಇಂತಹ ಅಪಘಾತಗಳು ಸಂಭವಿಸುವುದಿಲ್ಲ. ಸಂಚಾರಿ ನಿಯಮಗಳನ್ನು ರೂಪಿಸಿರುವುದು ಸಾರ್ವಜನಿಕರ ಜೀವ ರಕ್ಷಣೆಗಾಗಿ ಎಂಬುದರ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕಿದೆ ಎಂದರು.
Stop Having Sex: ದಿಢೀರ್ ಲೈಂಗಿಕ ಸಂಪರ್ಕ ನಿಲ್ಲಿಸಿದರೆ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ದಾರಿ!
ಸಂಚಾರಿ ನಿಯಮದ ಪ್ರಕಾರ ಗೂಡ್ಸ್ ವಾಹನದಲ್ಲಿ ಜನರ ಸಂಚಾರ ನಿಷೇಧಿಸಲಾಗಿದೆ. ಇಂದು ನಡೆದ ಅಪಘಾತದಲ್ಲಿ ದೇವರ ದಯೆಯಿಂದ ಯಾವುದೇ ಸಾವು ಸಂಭವಿಸಿಲ್ಲ. 20 ಜನಕ್ಕೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು. ಹೆಚ್ಚಿನ ಚಿಕಿತ್ಸೆ ಬೇಕಿರುವವರಿಗೆ ಅಗತ್ಯ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಜಿಲ್ಲೆಯಲ್ಲಿ ಜನರು ಸಂಚಾರಿ ನಿಯಮ ಪಾಲನೆಯ ಬಗ್ಗೆ ಹೆಚ್ಚು ನಿಗಾ ವಹಿಸಬೇಕು. ಹೆಲ್ಮೆಟ್ ಧರಿಸುವಿದು, ವಾಹನ ಚಲಾಯಿಸುವಾಗ ಮೊಬೈಲ್ ಬಳಕೆ ನಿಷೇಧಿಸುವುದು ಮುಂತಾದ ನಿಯಮಗಳನ್ನು ಜೀವ ರಕ್ಷಣೆಗಾಗಿ ಪಾಲಿಸಿ ಎಂದರು.
ಇದೇ ಸಂದರ್ಭದಲ್ಲಿ ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಸೇರಿದಂತೆ ಮತ್ತಿತರರು ಇದ್ದರು.