ಕೋಲಾರ: ರಾಜ್ಯದಲ್ಲಿನ ಸರ್ಕಾರದಿಂದ ಕಳೆದ ಒಂದು ವರ್ಷದಲ್ಲೇ ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ 376 ಕೋಟಿ ಅನುದಾನ ಒದಗಿಸಲಾಗಿದೆ. ಅಭಿವೃದ್ಧಿಯ ದೃಷ್ಟಿಯಿಂದ ಇನ್ನೂ ಅಗತ್ಯವಿರುವಷ್ಟು ಅನುದಾನ ಕೊಡಲು ಸರ್ಕಾರವು ಸಿದ್ದವಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ಎಸ್ ಸುರೇಶ್ ಹೇಳಿದರು.
ಅಕ್ರಮವಾಗಿ ರಸ್ತೆ ನಿರ್ಮಾಣ: ಶಾಸಕ ಗಣೇಶ್ ಪ್ರಸಾದ್ ವಿರುದ್ದ ಗಂಭೀರ ಆರೋಪ!
ಕೋಲಾರ ತಾಲೂಕಿನ ನರಸಾಪುರ ಗ್ರಾಮದಲ್ಲಿ ನಾಲ್ಕು ಪಥದ ರಸ್ತೆಗೆ 7 ಕೋಟಿ, ರಾಷ್ಟ್ರೀಯ ಹೆದ್ದಾರಿಯಿಂದ ಖಾಜಿಕಲ್ಲಹಳ್ಳಿ ಮಾರ್ಗದ ರಸ್ತೆಗೆ 5 ಕೋಟಿ ಹಾಗೂ ನರಸಾಪುರ ಸೊಸೈಟಿಯ ನೂತನ ಕಟ್ಟಡಕ್ಕೆ 1.5 ಕೋಟಿ ಸೇರಿದಂತೆ ಒಟ್ಟು 13.5 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯಲ್ಲಿ ಭಾಗವಹಿಸಿ ಮಾತನಾಡಿದ್ರು,
ಇಡೀ ರಾಜ್ಯದಲ್ಲಿ ನಮ್ಮ ಸರ್ಕಾರದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳ ಸರಮಾಲೆಯೇ ನಡೆಯುತ್ತಿದೆ. ವಿಪಕ್ಷಗಳು ಪಕ್ಷಗಳು ಆಡಳಿತ ಪಕ್ಷದ ಮೇಲೆ ಹಣ ಖಾಲಿಯಾಗಿದೆ ಎಂದು ಗೂಬೆ ಕೂರಿಸಲು ಹೊರಟಿದ್ದಾರೆ ಜನಕ್ಕೆ ಅಭಿವೃದ್ಧಿ ಕಣ್ಣಮುಂದೆಯೇ ಇದೆ ಎಂದರು. ಹಿಂದಿನ ಸರಕಾರದಲ್ಲಿ 40% ಕಮಿಷನ್ ನಿಂದ ಅಭಿವೃದ್ಧಿ ಶೂನ್ಯವಾಗಿತ್ತು ನಮ್ಮ ಸರಕಾರವು ಜನರ ದುಡ್ಡನ್ನೇ ಜನರಿಗೆ ಕೊಡುತ್ತಿದ್ದೇವೆ ಕಳೆದ ಸರ್ಕಾರದಲ್ಲಿ ಅವರಿಗೆ ತಿನ್ನಲು ಸಾಕಾಗಲಿಲ್ಲ ಅದಕ್ಕೆ ಅಭಿವೃದ್ಧಿ ಶೂನ್ಯವಾಗಿತ್ತು ನಾವು ರಾಜಕಾರಣವನ್ನು ಹೊಟ್ಟೆಪಾಡಿಗೆ, ವ್ಯಾಪಾರಕ್ಕೆ ಮಾಡಲು ಬಂದಿಲ್ಲ ಜನರ ಸೇವೆ ಮಾಡಲು ಬಂದಿದ್ದು ಅಭಿವೃದ್ಧಿಯೇ ನಮ್ಮ ಗುರಿ ಮತ್ತು ಉದ್ದೇಶವಾಗಿದೆ ಎಂದರು.