ಹೈದರಾಬಾದ್: ತಿರುಪತಿ ದೇವಸ್ಥಾನದ ಲಡ್ಡು ಪ್ರಸಾದ ವಿವಾದ ಜೋರಾಗುತ್ತಿದ್ದಂತೆ ಮಾಜಿ ಸಿಎಂ ಜಗನ್ ರೆಡ್ಡಿ ಆಂಧ್ರ ಹೈಕೋರ್ಟ್ ಮೊರೆ ಹೋಗಿದ್ದಾರೆ. ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬನ್ನು ಬೆರೆಸಲಾಗಿದೆ ಸಿಎಂ ಚಂದ್ರಬಾಬು ನಾಯ್ಡು ಅವರು ಆರೋಪಿಸಿದ್ದಾರೆ.
ಹೀಗಾಗಿ ಈ ಆರೋಪದ ಬಗ್ಗೆ ಹಾಲಿ ನ್ಯಾಯಾಧೀಶರು ಅಥವಾ ಹೈಕೋರ್ಟ್ ನೇಮಿಸಿದ ಸಮಿತಿ ತನಿಖೆ ನಡೆಸಬೇಕು ಎಂದು ಜಗನ್ ಪರ ವಕೀಲರು ಮನವಿ ಮಾಡಿದರು. ಈ ವೇಳೆ ಸೆ.25 ರ ಒಳಗಡೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ. ಅಂದು ವಿಚಾರಣೆ ನಡೆಸಲಾಗುವುದು ಎಂದು ಹೈಕೋರ್ಟ್ ಸೂಚಿಸಿದೆ.
ಲ್ಯಾಬ್ ವರದಿಯಲ್ಲಿ ಏನಿದೆ?
ಲಡ್ಡುಗೆ ಬಳಸಿದ ತುಪ್ಪದಲ್ಲಿ ಮೀನೆಣ್ಣೆ, ಹಂದಿಯ ಕೊಬ್ಬು, ತಾಳೆ ಎಣ್ಣೆ ಕೊಬ್ಬು, ತೆಂಗಿನ ಎಣ್ಣೆಯ ಕೊಬ್ಬು ಪತ್ತೆಯಾಗಿದೆ. ಸೋಯಾ, ಸೂರ್ಯಕಾಂತಿ, ಆಲಿವ್, ಹತ್ತಿ ಬೀಜದೆಣ್ಣೆ ಸಿಕ್ಕಿದೆ. ತುಪ್ಪದಲ್ಲಿ ವ್ಹೀಟ್ ಜೆರ್ಮ್ ಆಯಿಲ್, ಮೇಜ್ ಜೆರ್ಮ್ ಆಯಿಲ್ ಪತ್ತೆಯಾಗಿದೆ. ಸಿಎಂ ಹೇಳಿಕೆಯನ್ನು ಟಿಟಿಡಿ ಭಾಗಶಃ ಒಪ್ಪಿದೆ.
ಬಂಪರ್ ಅವಕಾಶ: ಕ್ರೀಡಾ ಕೋಟಾದಡಿ ಸುಲಭವಾಗಿ ಸರ್ಕಾರಿ ಉದ್ಯೋಗ ಪಡೆಯಬಹುದು!
ಒಂದು ಕಂಪನಿಯ ತುಪ್ಪದಲ್ಲಿ ವೆಜಿಟೆಬಲ್ ಫ್ಯಾಟ್ ಬೆರೆಸಿರುವುದು ಗೊತ್ತಾಗಿದೆ ಎಂದು ಟಿಟಿಡಿ ಇಓ ಶ್ಯಾಮಲರಾವ್ ಹೇಳಿದ್ದಾರೆ. ಟಿಟಿಡಿ ಮಾಜಿ ಸದಸ್ಯ ಓವಿ ರಮಣ ಅವರು ಚಂದ್ರಬಾಬು ನಾಯ್ಡು ಹೇಳಿದ್ದೆಲ್ಲಾ ಸತ್ಯ ಎಂದಿದ್ದಾರೆ. ಜಗನ್ ಸಿಎಂ ಆಗಿದ್ದಾಗ ವಿದೇಶದಿಂದ ಆಮದು ಮಾಡಿಕೊಂಡ ಬೆಣ್ಣೆಯನ್ನು ಲಡ್ಡು ತಯಾರಿಗೆ ಬಳಸಲಾಗುತ್ತಿತ್ತು ಎಂದು ಆಪಾದಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಗೆ ಬಿಜೆಪಿ ಆಗ್ರಹಿಸಿದೆ.