ಬೆಂಗಳೂರು: ವಿದ್ಯಾರ್ಥಿನಿಯ ಶೌಚಾಲಯದಲ್ಲಿ ಮೊಬೈಲ್ ಇರಿಸಿ ವಿಡಿಯೋ ಚಿತ್ರೀಕರಣ ಮಾಡಿರುವ ಘಟನೆ ಬೆಂಗಳೂರಿನ ಕಗ್ಗಲಿಪುರದಲ್ಲಿರುವ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ. ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಯುವಕನನ್ನು ಬಂಧಿಸುವಂತೆ ಆಗ್ರಹಿಸಲಾಗಿತ್ತು. ಸ್ತಳಕ್ಕೆ ಕುಂಬಳಗೋಡು ಪೊಲೀಸರು ಭೇಟಿ ನೀಡಿದ್ದು, ಅನುಮಾನಾಸ್ಪದ ಯುವಕ ಮತ್ತು ಆತನ ಮೊಬೈಲ್ನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ.
ಬಂಪರ್ ಅವಕಾಶ: ಕ್ರೀಡಾ ಕೋಟಾದಡಿ ಸುಲಭವಾಗಿ ಸರ್ಕಾರಿ ಉದ್ಯೋಗ ಪಡೆಯಬಹುದು!
ಆರೋಪ ಕೇಳಿಬರುತ್ತಿದ್ದಂತೆ ವಿದ್ಯಾರ್ಥಿನಿಯರಿಂದ ಗಲಾಟೆ ಮಾಡಲಾಗಿದೆ. ಯುವಕನನ್ನು ಬಂಧಿಸುವಂತೆ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ. ನ್ಯಾಯ ಬೇಕು ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಸದ್ಯ ಸ್ಥಳಕ್ಕೆ ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿದ್ದಾರೆ.