ಬೆಂಗಳೂರು:- ತಿರುಪತಿ ಲಡ್ಡು ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ದೇವಸ್ಥಾನಗಳು ಪ್ರಸಾದದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸುವಂತೆ ಧಾರ್ಮಿಕ ದತ್ತಿ ಇಲಾಖೆಯು ಆದೇಶ ಹೊರಡಿಸಿದೆ.
ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದು ಇರಲ್ಲ ಪವರ್: ಕರೆಂಟ್ ಸಮಸ್ಯೆಯಿಂದ ಗ್ರಾಹಕರ ಕಂಗಾಲು!
ಹಿಂದೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಿಗೆ ಇದು ಅನ್ವಯವಾಗಲಿದೆ. ದೇವಾಲಯಗಳಲ್ಲಿ ನಂದಿನಿ ತುಪ್ಪ ಮಾತ್ರ ಬಳಸುವಂತೆ ಆದೇಶಿಸಲಾಗಿದೆ. ದೇವಸ್ಥಾನ ದೀಪಗಳಿಗೆ, ಪ್ರಸಾದ ತಯಾರಿಕೆ, ದಾಸೋಹ ಭವನದಲ್ಲಿ ನಂದಿನಿ ತುಪ್ಪ ಬಳಸಬೇಕು ಎಂದು ಸೂಚನೆ ನೀಡಲಾಗಿದೆ. ದೇವಾಲಯಗಳಲ್ಲಿ ತಯಾರಿಸುವ ಪ್ರಸಾದದ ಗುಣಮಟ್ಟ ಕಾಪಾಡುವಂತೆ ಎಚ್ಚರಿಕೆ ನೀಡಲಾಗಿದೆ.