ಬೆಂಗಳೂರು: ತಿರುಪತಿ ಲಡ್ಡು ತಯಾರಿಕೆಗೆ ಪ್ರಾಣಿ ಕೊಬ್ಬು ಬಳಸಿದ ಪ್ರಕರಣ (Tirupati Laddu row) ತನಿಖೆ ಆಗಲಿ ಎಂದು ಸಚಿವ ಎಂ.ಬಿ ಪಾಟೀಲ್ (M.B Patil) ಹೇಳಿದ್ದಾರೆ.
https://youtu.be/L5eui5H3Lbo?si=WVLXRciNgPLl47i4
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧಾರ್ಮಿಕವಾಗಿ ಪಾವಿತ್ರ್ಯ ಹೊಂದಿರುವ ತಿರುಪತಿ ಲಡ್ಡುವಿಗೆ ಪ್ರಾಣಿ ಜನ್ಯ ಕೊಬ್ಬನ್ನು ಸೇರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದು ನಿಜವೇ ಆಗಿದ್ದಲ್ಲಿ ತುಂಬಾ ಆಘಾತಕಾರಿಯಾಗಿದೆ. ಆದ್ದರಿಂದ ಈ ಬಗ್ಗೆ ತನಿಖೆ ನಡೆದು, ತಪ್ಪು ಮಾಡಿದವರಿಗೆ ಶಿಕ್ಷೆ ಕೊಡಬೇಕು ಎಂದು ಆಗ್ರಹಿಸಿದರು.
ಮೊದಲೆಲ್ಲ ಕೆಎಂಎಫ್ ತಿರುಪತಿಗೆ ತುಪ್ಪ ಪೂರೈಸುತ್ತಿತ್ತು. ಆಗ ಕಲಬೆರಕೆ ಇತ್ಯಾದಿ ಏನೂ ಇರಲಿಲ್ಲ. ಈ ಬಗ್ಗೆ ನಾನು ಕೆಎಂಎಫ್ ಅಧ್ಯಕ್ಷರ ಜೊತೆ ಕೂಡ ಮಾತನಾಡಿದ್ದೇನೆ. ಯಾರೇ ಆದರೂ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಬಾರದು. ಈ ಪ್ರಕರಣ ತನಿಖೆಯಾಗಲಿ ಎಂದು ಅವರು ಒತ್ತಾಯಿಸಿದರು.