ಬೆಂಗಳೂರು:- ಕರ್ನಾಟಕದ ಕೆಎಂಎಫ್ ನಂದಿನಿ ತುಪ್ಪಕ್ಕೆ ಭಾರಿ ಡಿಮ್ಯಾಂಡ್ ಬಂದಿದೆ. ತಿರುಪತಿ ಲಡ್ಡು ವಿವಾದ ಬೆನ್ನಲ್ಲೇ ಮತ್ತಷ್ಟು ನಂದಿನಿ ತುಪ್ಪ ಪೂರೈಸುವಂತೆ KMFಗೆ ಟಿಟಿಡಿ ಮನವಿ ಮಾಡಿದೆ. ಇ-ಮೇಲ್ ಮೂಲಕ KMFಗೆ ಮನವಿ ಸಲ್ಲಿಸಿದೆ.
India vs Bangladesh: ವಿಶೇಷ ಮೈಲುಗಲ್ಲು ದಾಟಿದ ಕನ್ನಡಿಗ ಕೆಎಲ್ ರಾಹುಲ್!
ಬೆಂಗಳೂರಿನಲ್ಲಿ ಕೆಎಂಎಫ್ ಎಂಡಿ ಜಗದೀಶ್ ಮಾತನಾಡಿದ್ದು, ರಾಜ್ಯದ ಮುಜರಾಯಿ ದೇಗುಲಗಳಿಗೆ ನಂದಿನಿ ತುಪ್ಪ ಪೂರೈಕೆಗೆ ಸಿದ್ಧತೆ ನಡೆಯುತ್ತಿದೆ. ಜೊತೆಗೆ ಬೇರೆ ರಾಜ್ಯಗಳಿಂದಲೂ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಿದೆ. ಪ್ರತಿದಿನ 15 ಲಕ್ಷ ಲೀಟರ್ ಹಾಲಿನಿಂದ ತುಪ್ಪ ತಯಾರಿಸಲು ಸಿದ್ಧತೆ ನಡೆಯುತ್ತಿದೆ. ಟಿಟಿಡಿಗೆ ತೆರಳುವ ನಂದಿನಿ ತುಪ್ಪದ ವಾಹನಗಳಿಗೆ ಸೂಕ್ತ ವ್ಯವಸ್ಥೆ ಮಾಡಲಾಗುತ್ತೆ. ತಿರುಪತಿಗೆ ನಂದಿನಿ ತುಪ್ಪ ಸಾಗಿಸುವ ವಾಹನಗಳಿಗೆ GPS ಟ್ರ್ಯಾಕ್, ಎಲೆಕ್ಟ್ರಿಕ್ ಡೋರ್ ವ್ಯವಸ್ಥೆ ಮಾಡಿಸಲಾಗುತ್ತಿದೆ ಎಂದು ತಿಳಿಸಿದರು.
ಲ್ಯಾಬ್ ಟೆಸ್ಟ್ ಮಾಡಿದ ಬಳಿಕ ನಂದಿನಿ ತುಪ್ಪ ಪೂರೈಸಲಾಗುತ್ತೆ. ಈ ಹಿಂದೆ ಇದ್ದ ಸರ್ಕಾರದಲ್ಲಿ ಟಿಟಿಡಿಗೆ ತುಪ್ಪ ಪೂರೈಕೆ ಮಾಡಿರಲಿಲ್ಲ. ಇದೀಗ ಟಿಟಿಡಿ ಬೇಡಿಕೆ ಮೇರೆಗೆ ನಂದಿನಿ ತುಪ್ಪ ಪೂರೈಕೆ ಮಾಡ್ತಿದ್ದೇವೆ. ಹಿಂದೆ ತಿರುಪತಿಗೆ ಯಾಕೆ ತುಪ್ಪ ಪೂರೈಸುತ್ತಿಲ್ಲ ಎಂದು ಕೇಳುತ್ತಿದ್ದರು. ಇಂದು ತಿಮ್ಮಪ್ಪನ ಕೃಪೆಯಿಂದ ಹೆಚ್ಚು ತುಪ್ಪ ಪೂರೈಕೆ ಮಾಡುತ್ತಿದ್ದೇವೆ. ಇದು ಕೆಎಂಎಫ್ನ ಹೆಮ್ಮೆಯ ವಿಚಾರ ಎಂದು ಹೇಳಿದ್ದಾರೆ.
ತಿರುಪತಿ ಲಡ್ಡು ವಿವಾದ ಇದೀಗ ದೇಶದಲ್ಲೇ ಭಾರೀ ಸಂಚಲನ ಮೂಡಿಸಿದೆ. ಚಂದ್ರಬಾಬು ನಾಯ್ಡು ಸರ್ಕಾರ ಈ ಬಗ್ಗೆ ತನಿಖೆಗೆ ಆದೇಶಿಸಿದೆ. ತಿರುಮಲ ಶ್ರೀವಾರಿ ಲಡ್ಡು ಭಕ್ತರ ಪಾಲಿಗೆ ಅತ್ಯಂತ ಪವಿತ್ರ. ಆದ್ರೆ ಇದೀಗ ಈ ಪಾವಿತ್ರ್ಯತೆಗೆ ಧಕ್ಕೆ ಬಂದಿದೆ ಅಂತ ಭಕ್ತರು ಕೂಡ ಆಕ್ರೋಶವನ್ನ ಹೊರ ಹಾಕ್ತಿದ್ದಾರೆ.