ನವದೆಹಲಿ: ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಸಿಎಂ ನಾಯ್ಡು ಆರೋಪಿಸಿದ ಬೆನ್ನಲ್ಲೇ, ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದ್ದು ತುಪ್ಪದ ಗುಣಮಟ್ಟವನ್ನು ಪರೀಕ್ಷಿಸಲು ಸಮಿತಿಯನ್ನು ದೇವಸ್ಥಾನದ ಆಡಳಿತ ಸ್ಥಾಪಿಸಿದೆ.
ಇನ್ನೂ ಅಯೋಧ್ಯೆ ರಾಮಮಂದಿರ ಪ್ರತಿಷ್ಠಾಪನೆ ದಿನ 300 ಕೆಜಿ ತಿರುಪತಿ ಲಡ್ಡು ಪ್ರಸಾದ ಬಂದಿತ್ತು ಎಂದು ಅಯೋಧ್ಯೆಯ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ತಿಳಿಸಿದ್ದಾರೆ. ರಾಮಮಂದಿರದಲ್ಲಿ ಭಕ್ತರಿಗೆ ಪ್ರಸಾದ ವಿತರಿಸಲಾಗಿತ್ತು. ಜನವರಿಯಲ್ಲಿ ರಾಮಮಂದಿರದ ಪ್ರಾಣ ಪ್ರತಿಷ್ಠೆಯ ಸಂದರ್ಭದಲ್ಲಿ ತಿರುಪತಿ ದೇವಸ್ಥಾನದಿಂದ 300 ಕೆಜಿ ಪ್ರಸಾದವನ್ನು ಭಕ್ತರಿಗೆ ಹಸ್ತಾಂತರಿಸಲಾಗಿದೆ ಎಂದು ಮುಖ್ಯ ಅರ್ಚಕರು ಖಚಿತಪಡಿಸಿದ್ದಾರೆ.
Condoms Problems: ಲೈಂಗಿಕ ಕ್ರಿಯೆ ಸಮಯದಲ್ಲಿ ಕಾಂಡೋಮ್ ಹರಿದ್ರೆ ತಕ್ಷಣ ಹೀಗೆ ಮಾಡಿ..!
2019 ಮತ್ತು 2024ರ ನಡುವೆ ಆಂಧ್ರದ ಮಾಜಿ ಸಿಎಂ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರು ಪ್ರತಿ ಬಾರಿ ದೆಹಲಿಗೆ ಭೇಟಿ ನೀಡಿದಾಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇವಸ್ಥಾನದ ಲಡ್ಡುಗಳನ್ನು ಉಡುಗೊರೆಯಾಗಿ ನೀಡಿದ್ದರು ಎಂದು ವರದಿ ತಿಳಿಸಿದೆ.
ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಸುದ್ದಿ ದೇಶಾದ್ಯಂತ ಚರ್ಚೆ ಹುಟ್ಟುಹಾಕಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಪ್ರತಿಪಕ್ಷ YSRCP, ನಾಯ್ಡು ಅವರು ರಾಜಕೀಯ ಲಾಭಕ್ಕಾಗಿ ಇಂತಹ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಟೀಕಿಸಿದೆ.
ಆಂಧ್ರಪ್ರದೇಶದ ತಿರುಪತಿಯಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ‘ಪ್ರಸಾದ’ (ಲಡ್ಡು) ತಯಾರಿಸಲು ಪ್ರಾಣಿಗಳ ಕೊಬ್ಬು ಬಳಸುತ್ತಿದ್ದ ಬಗ್ಗೆ ಅಯೋಧ್ಯೆ ರಾಮಮಂದಿರದ ಮುಖ್ಯ ಅರ್ಚಕರು ಬೇಸರ ಹೊರಹಾಕಿದ್ದಾರೆ. ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬನ್ನು ಬೆರೆಸಿದ್ದರೆ ಅದು ಅಕ್ಷಮ್ಯ. ಇದರಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸತ್ಯೇಂದ್ರ ದಾಸ್ ಒತ್ತಾಯಿಸಿದ್ದಾರೆ.