ಬೆಂಗಳೂರು:- ಮೂಡಾ ಹಗರಣದ ವಿಚಾರದಲ್ಲಿ ಸಂಕಷ್ಟ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಕಾಂಗ್ರೆಸ್ ಸರ್ಕಾರ vs ರಾಜಭವನದ ನಡುವಿನ ಸಂಘರ್ಷ ತಾರಕ್ಕೇರ್ತಿದೆ, ಸಿಎಮ ಸಿದ್ದರಾಮಯ್ಯ ವಿರುದ್ಧ ರಾಜ್ಯಾಪಾಲ ಥಾವರ್ ಚಂದ ಗಹಲೋಟ್ ಸಮರ ಸಾರಿದಂತೆ ಕಾಣ್ತಿದೆ. ಅರ್ಕಾವತಿ ಡಿ ನೋಟಿಫೀಕೇಷನ್ ಗೆ ಕೈ ಹಾಕಿರೋ ರಾಜ್ಯಪಾಲರು ರೀಡೂ ವಿಚಾರಣಾ ಆಯೋಗದ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಈ ವಿಚಾರ ರಾಜಕೀಯವಾಗಿ ಜೋರಾಗಿ ಚರ್ಚೆಯಾಗ್ತಿದ್ದು ಮಾಜಿ ಸಚಿವ ಅಶ್ವಥ್ ನಾರಾಯಣ್ ಸರ್ಕಾರ ವಿರುದ್ಧ ಕಿಡಿ ಕಾರ್ತಿದ್ರೆ, ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ..
Murder Case: ಮಹಿಳೆಯ ಬರ್ಬರ ಕೊಲೆ: ಈ ನಾಲ್ವರಿಗೆ ಬಲೆ ಬೀಸಿದ ಪೊಲೀಸರು!
ಮುಡಾ ಹಗರಣದಲ್ಲಿ ರಾಜ್ಯಪಾಲರ ಪ್ರಾಸಿಕ್ಯೂಷನ್ ನಿರ್ಧಾರದ ವಿರುದ್ಧ ಹೋರಾಟ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅರ್ಕಾವತಿ ಡೀನೋಟಿಫಿಕೇಷನದ ಪ್ರಕರಣಕ್ಕೆ ಸಂಬಂಧಿಸಿದಂತೆ ‘ರೀಡೂ ವರದಿ ಕೊಡಿ’ ಎಂದು ರಾಜ್ಯ ಸರ್ಕಾರಕ್ಕೆ ರಾಜ್ಯಪಾಲ ಥಾವರಚಂದ್ ಗೆಹಲೋಟ್ ಪತ್ರ ಬರೆದಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಈ ಹಿಂದೆ ಮೊದಲ ಭಾರಿ ಮುಖ್ಯಮಂತ್ರಿಯಾಗಿದ್ದಾಗ ‘ರೀಡೂ’ ಹೆಸರಿನಲ್ಲಿ ಅರ್ಕಾವತಿ ಬಡಾವಣೆಯ ಭೂಮಿ ಡಿನೋಟಿಫಿಕೇಶನ್ ಮಾಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಚ್ಎಸ್ ಕೆಂಪಣ್ಣ ಆಯೋಗದ 1800 ಪುಟಗಳ 6 ಸಂಪುಟಗಳ ವರದಿಯ ಮೂಲ ಪ್ರತಿಗಳ ವರದಿ ಮತ್ತು ಸಂಬಂಧಪಟ್ಟ ದಾಖಲೆಗಳನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರದ ನಗರಾಭಿವೃದ್ಧಿ ಇಲಾಖೆಗೆ ರಾಜ್ಯಪಾಲ ಥಾವರಚಂದ್ ಗೆಹಲೋಟ್ ಪತ್ರ ಬರೆದಿದ್ದಾರೆ.
2013–18ರ ಅವಧಿಯ ವಿವರಣೆಯನ್ನು ರಾಜ್ಯಪಾಲರು ಕೇಳಿದ್ದು, ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ರಾಜ್ಯಪಾಲರು ಬರೆದಿರುವ ಪತ್ರವನ್ನು ಉಲ್ಲೇಖಿಸಿ, ಆಯೋಗದ ವರದಿಗೆ ಸಂಬಂಧಿಸಿದ ಕಡತವನ್ನು ಬೆಂಗಳೂರು ಅಭಿವೃದ್ಧಿ ಸಚಿವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ನಗರಾಭಿವೃದ್ಧಿ ಇಲಾಖೆ ಇದೇ 11ರಂದು ಸಲ್ಲಿಸಿದೆ.
ಅರ್ಕಾವತಿ ಬಡಾವಣೆಗಾಗಿ ಸ್ವಾಧೀನ ಮಾಡಿದ್ದ ಭೂಮಿಯಲ್ಲಿ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ಸೂಚನೆಯಂತೆ 2014ರಲ್ಲಿ ಡಿನೋಟಿಫಿಕೇಷನ್ ಮಾಡಲಾಗಿತ್ತು. 472.25 ಎಕರೆ ಬದಲು ಹೆಚ್ಚುವರಿಯಾಗಿ 119 ಎಕರೆ ಸೇರಿಸಿ 541.25 ಎಕರೆ ಕೈ ಬಿಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ನ್ಯಾ. ಎಚ್.ಎಸ್. ಕೆಂಪಣ್ಣ ಆಯೋಗವನ್ನು 2015ರಲ್ಲಿ ಸಿದ್ದರಾಮಯ್ಯ ಸರ್ಕಾರ ರಚನೆ ಮಾಡಿತ್ತು.
ಇತ್ತೀಚೆಗೆ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅರ್ಕಾವತಿ ಬಡಾವಣೆಯ ಡಿನೋಚಿಫಿಕೇಷನ್ನಲ್ಲಿ 8 ಸಾವಿರ ಕೋಟಿ ರೂ.ಗಳಷ್ಟು ಅಕ್ರಮವಾಗಿದೆ ಎಂಬ ಆರೋಪ ಮಾಡಿದ್ದರು. ರಾಜ್ಯಪಾಲರಿಗೆ ಆಗಸ್ಟ್ 24ರಂದು ಪತ್ರ ಬರೆದಿದ್ದ ಸಿ.ಟಿ. ರವಿ, ಕೆಂಪಣ್ಣ ಆಯೋಗದ ವರದಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದ್ದರು. ಈ ವಿಚಾರವಾಗಿ ಈಗ ರಾಜ್ಯಪಾಲರು ವರದಿ ಕೇಳಿದ್ದಾರೆ.
ರಾಜ್ಯಪಾಲರು ವರದಿ ಕೇಳಿದ ವಿಚಾರವಾಗಿ ಮಾತನಾಡಿದ ಮಾಜಿ ಸಚಿವ ಅಶ್ವಥ್ ನಾರಾಯಣ
ಇದು ಒಳ್ಳೆಯದೇ ಅಲ್ವಾ ಕಾಂಗ್ರೆಸ್ ಅವರಿಗೆ ಯಾವುದೂ ಸರಿಯಲ್ಲ, ಯಾರೂ ಕೇಳದೆ ಕೆಂಪಣ್ಣ ಆಯೋಗ ಮಾಡಿದ್ರು ಸಿದ್ದರಾಮಯ್ಯ ಬಹಳ ಪ್ರಾಮಾಣಿಕರು ಅಂತ ಹೇಳ್ತಾರೆ. ಯಾಕಿಷ್ಟು ಆತಂಕ, ಸಾಮಾನ್ಯ ವ್ಯಕ್ತಿಯನ್ನೂ ಸಾಕ್ಷಿ ಕೇಳ್ತಾರೆ ನೀವು ಬಹಳ ಪ್ರಾಮಾಣಿಕ ವ್ಯಕ್ತಿಯಾಗಿದ್ರೆ ರಾಜ್ಯಪಾಲರಿಗೆ ವರದಿ ಕೊಟ್ಟು ತನಿಖೆಗೆ ಸಹಕರಿಸಿ ಅಂತ ಸರ್ಕಾರಕ್ಕೆ ಸವಾಲ್ ಹಾಕಿದ್ರು ಅಶ್ವಥ್ ನಾರಾಯಣ….
ರಾಜ್ಯಪಾಲರು ರೀಡೂ ವರದಿ ಕೇಳಿರೋ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅರ್ಕಾವತಿ ಬಡಾವಣೆ ಬಗ್ಗೆ ರಾಜ್ಯಪಾಲರು ಸರ್ಕಾರಕ್ಕೆ ಪತ್ರ ಬರೆದಿದ್ದರೆ ಮಾಹಿತಿ ತಗೊಳ್ತೀನಿ. ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ವಿಚಾರ ರಾಜ್ಯಪಾಲರ ಕಛೇರಿಯಿಂದಲೇ ಮಾಹಿತಿ ಸೋರಿಕೆಯಾಗಿರಬಹುದು. ರೀ ಡೂ ಮಾಡಿ ಎಂದು ಬಿಡಿಎ ಗೆ ಸುಪ್ರೀಂ ಕೋರ್ಟ್ ಹೇಳಿದೆ ನೋಡಿ ಮುಂದೆ ಮಾತಾಡ್ತೀನಿ ಎಂದ್ರು ಸಿಎಂ ಸಿದ್ದರಾಮಯ್ಯ…..
ಒಟ್ನಲ್ಲಿ ಕಾಂಗ್ರೆಸ್ ಸರ್ಕಾರ vs ರಾಜಭವನದ ನಡುವೆ ಹಗರಣಗಳ ಸಂಘರ್ಷ ತಾರಕ್ಕೇರ್ತಿರುವ ಮಧ್ಯೆಯೇ ಮೂಡಾ ಹಗರಣದಲ್ಲಿ ಸಿಲುಕಿರೋ ಸಿಎಂ ಸಿದ್ದರಾಮಯ್ಯಗೆ ಅರ್ಕಾವತಿ ರೀಡೂ ಸಂಕಷ್ಟ ಎದುರಾಗಿದೆ. ರಾಜ್ಯಪಾಲರು ಸರ್ಕಾರದಿಂದ ತನಿಖಾ ವರದಿ ಕೇಳಿರೋದು ಸಾಕಷ್ಟು ಕುತೂಹಲ ಕೆರಳಿಸಿದೆ, ರೀಡೋ ಮೂಡಾದಂತೆ ಸಿಎಂ ಸಿದ್ದುಗೆ ಕಂಠಕ ತಂದೊಡ್ಡುತ್ತಾ ಎಂಬುದನ್ನು ಕಾದುನೋಡಬೇಕಿದೆ….